ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಟಾಟಾ ಸುಮೋವೊಂದು ಆಳವಾದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಎಂಟು ಜನರು ಮೃತಪಟ್ಟು ಹಾಗೂ ಇತರ ಮೂವರು ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.
ಇಲ್ಲಿನ ಗುಡ್ಡಗಾಡಿನ ಚಟ್ರೋ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಸುಮೋ ರಸ್ತೆಯಿಂದ ಸ್ಕಿಡ್ ಆಗಿ ಕಮರಿಗೆ ಉರುಳಿದೆ. ಇದರ ಮಾಹಿತಿ ತಿಳಿದ ಭಾರತೀಯ ಸೇನೆ ಹಾಗೂ ಕಿಶ್ತ್ವಾರ್ ಪೊಲೀಸರು ತಕ್ಷಣವೇ ಸ್ಥಳಕ್ಕೆ ಪರಿಹಾರ ಕಾರ್ಯಾಚರಣೆ ನಡೆಸಿದ್ದಾರೆ.
ಮೃತದೇಹಗಳನ್ನು ಹೊರತೆಗೆದು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. ಮೂವರು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರು ಮತ್ತು ಗಾಯಾಳುಗಳ ಗುರುತು ಗೊತ್ತಾಗಿಲ್ಲ.
ಈ ಘಟನೆಗೆ ಆಘಾತ ವ್ಯಕ್ತಪಡಿಸಿರುವ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಕಿಶ್ತ್ವಾರ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದ ಘಟನೆ ವಿಷಯ ತಿಳಿದು ತೀವ್ರ ನೋವಾಗಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು ಮತ್ತು ಗಾಯಾಳುಗಳ ಶೀಘ್ರ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಲು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಕರ್ನಾಟಕದಲ್ಲಿ ಹೆಚ್ಚಿದ ಮಹಿಳಾ ದೌರ್ಜನ್ಯ: ಇಲ್ಲಿದೆ ಸಂಪೂರ್ಣ ಕ್ರೈಂ ರೆಕಾರ್ಡ್