ತೆಲಂಗಾಣ: ನಾಗರ್ ಕರ್ನೂಲ್ ಜಿಲ್ಲೆಯಲ್ಲಿ ಹೈದರಾಬಾದ್-ಶ್ರೀಶೈಲಂ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 8 ಮಂದಿ ಮೃತಪಟ್ಟಿದ್ದಾರೆ. ಎರಡು ಕಾರುಗಳ ನಡುವಿನ ಡಿಕ್ಕಿಯಲ್ಲಿ ಮತ್ತೊಬ್ಬ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಡಿಕ್ಕಿಯ ರಭಸಕ್ಕೆ ಎರಡೂ ಕಾರುಗಳು ನಜ್ಜು ಗುಜ್ಜಾಗಿವೆ. ಅವಶೇಷಗಳಡಿ ಸಿಲುಕಿದ್ದ ಮೃತದೇಹಗಳನ್ನು ಹೊರ ತೆಗೆಯಲಾಗಿದೆ ಡಿಎಸ್ಪಿ ನರಸಿಂಹಲು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಮಾಹಿತಿ ಪಡೆದ ನಂತರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಹಾರ ಕ್ರಮಗಳನ್ನು ಕೈಗೊಂಡಿದ್ದಾರೆ. ಕಾರಿನಲ್ಲಿ ಸಿಕ್ಕಿಬಿದ್ದ ಶವಗಳನ್ನು ಹೊರ ತೆಗೆದಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಅಚನ್‌ಪೇಟಾ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕತ್ತಲೆಯಾಗುತ್ತಿದ್ದ ಕಾರಣ ಪರಿಹಾರ ಕಾರ್ಯಗಳಿಗೆ ಅಡ್ಡಿಯಾಯಿತು. ಕಾರುಗಳಲ್ಲಿ ಸಿಲುಕಿಕೊಂಡಿದ್ದ ಶವಗಳನ್ನು ಹೊರತೆಗೆದು ಅಚನ್‌ಪೇಟಾ ಸರ್ಕಾರಿ ಆಸ್ಪತ್ರೆಗೆ ಆದಷ್ಟು ಬೇಗ ಸ್ಥಳಾಂತರಿಸಲು ಪೊಲೀಸರು ಪ್ರಯತ್ನಿಸಿದರು. ಜಿಲ್ಲಾಧಿಕಾರಿ ಎಲ್.ಶರ್ಮನ್ ಮತ್ತು ಅಚನ್‌ಪೇಟ ಶಾಸಕ ಗುವಾಲಾ ಬಲರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ದೇಹಗಳ ಗುರುತು ಪತ್ತೆ:
ಚೆನ್ನಾರಂ ಗೇಟ್‌ನಲ್ಲಿರುವ ಹೈದರಾಬಾದ್-ಶ್ರೀಶೈಲಂ ರಸ್ತೆಯಲ್ಲಿ ಎರಡು ಕಾರುಗಳು ಅತಿ ವೇಗದಲ್ಲಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಉಲ್ಬಣಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಭಾಗಿಯಾಗಿದ್ದ 1 ಕಾರು ಹೈದರಾಬಾದ್‌ಗೆ ಸೇರಿದವರು ಎಂದು ಗುರುತಿಸಲಾಗಿದೆ.
ಮೃತರನ್ನು ಜೀಡಿಮೆಟ್ಲದ ವಂಸಿ, ನಿಜಂಪೇಟೆಯ ವೆಂಕಟ್, ಪತಂಚೇರು ನರೇಶ್ ಮತ್ತು ಆನಂದ್‌ಬಾಗ್‌ನ ಶಿವಕುಮಾರ್ ಎಂದು ಗುರುತಿಸಲಾಗಿದೆ. ಪ್ರಕರಣ ದಾಖಲಿಸಿದ ಪೊಲೀಸರು ಅಪಘಾತಕ್ಕೆ ಕಾರಣವಾಗಿರುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಮೃತದೇಹಗಳಲ್ಲಿ ಲಭ್ಯವಿರುವ ಗುರುತಿನ ಚೀಟಿ ಮತ್ತು ಕಾರಿನ ಸಂಖ್ಯೆಗಳ ಆಧಾರದ ಮೇಲೆ ಪೊಲೀಸರು ಮೃತರ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ.
ಪ್ರಧಾನಿ ಸಂತಾಪ:
ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿ ತೆಲುಗು ಭಾಷೆಯಲ್ಲೇ ಟ್ವೀಟ್ ಮಾಡಿದ್ದಾರೆ. ಜೊತೆಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಸ್ಥರಿಗೆ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ನೀಡುವುದಾಗಿ ಮೋದಿ ಘೋಷಿಸಿದ್ದಾರೆ.
ಸಿಎಂ ಕೆಸಿಆರ್ ಕೂಡ ಘಟನೆಗೆ ದಿಗ್ಭ್ರಾಂತಿ ವ್ಯಕ್ತಪಡಿಸಿದ್ದಾರೆ ಎಂದು ಸಿಎಂ ಕಚೇರಿ ಟೀಟ್ ಮಾಡಿದೆ.