ETV Bharat / bharat

ಉತ್ತರ ಪ್ರದೇಶ: ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಶಾಲಾ ಶಿಕ್ಷಕ, ವ್ಯವಸ್ಥಾಪಕನಿಂದ ಅತ್ಯಾಚಾರ - ಅಪ್ರಾಪ್ತೆ ಮೇಲೆ ಶಾಲಾ ಶಿಕ್ಷಕ ರೇಪ್​

ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡ್ತಿದ್ದ ಮೂರನೇ ತರಗತಿ ವಿದ್ಯಾರ್ಥಿನಿ ಮೇಲೆ ಶಾಲಾ ಶಿಕ್ಷಕ ಹಾಗೂ ಮ್ಯಾನೇಜರ್​ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

8-year-old girl raped by school teacher
8-year-old girl raped by school teacher
author img

By

Published : Mar 3, 2022, 9:56 PM IST

ಮುಜಾಫರ್​​ನಗರ(ಉತ್ತರ ಪ್ರದೇಶ): ಎಂಟು ವರ್ಷದ ಬಾಲಕಿಯೋರ್ವಳ ಮೇಲೆ ಶಾಲಾ ಶಿಕ್ಷಕ ಹಾಗೂ ಮ್ಯಾನೇಜರ್​ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್​ನಗರದಲ್ಲಿ ನಡೆದಿದೆ.

ಇದಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಸೆಕ್ಷನ್​ 376 ಹಾಗೂ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬಾಲಕಿ ಕೊತ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ 3ನೇ ತರಗತಿ ವ್ಯಾಸಂಗ ಮಾಡ್ತಿದ್ದು, ಶಿಕ್ಷಕ ಮತ್ತು ಮ್ಯಾನೇಜರ್​ ಈ ಕೃತ್ಯವೆಸಗಿದ್ದಾರೆ. ಶಾಲೆಯಿಂದ ಮನೆಗೆ ಬಂದ ಬಳಿಕ ಪೋಷಕರ ಮುಂದೆ ತಾನು ಅನುಭವಿಸಿರುವ ಸಮಸ್ಯೆ ಬಗ್ಗೆ ಹೇಳಿಕೊಂಡಿದ್ದಾಳೆ.

ಇದನ್ನೂ ಓದಿ: ರಾಕೆಟ್ ಮೇಲಿದ್ದ ಭಾರತದ ತ್ರಿವರ್ಣ ಧ್ವಜ ಬಿಟ್ಟು ಬೇರೆಲ್ಲ ದೇಶಗಳ ಧ್ವಜ ತೆಗೆದು ಹಾಕಿದ ರಷ್ಯಾ

ಪೊಲೀಸ್ ಠಾಣೆಗೆ ತೆರಳಿರುವ ಬಾಲಕಿ ತಂದೆ ದೂರು ದಾಖಲು ಮಾಡಿದ್ದಾರೆ. ಈ ದೂರಿನ ಆಧಾರದ ಮೇಲೆ ಇಬ್ಬರು ಆರೋಪಿಗಳ ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್​ 376 ಮತ್ತು ಲೈಂಗಿಕ ಅಪರಾಧಗಳ ಮಕ್ಕಳ ರಕ್ಷಣೆ(ಪೋಕ್ಸೊ)ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ. ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೋಸ್ಕರ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅತ್ಯಾಚಾರ ನಡೆದಿರುವುದು ದೃಢಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.