ETV Bharat / bharat

ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿ ಹೃದಯಾಘಾತದಿಂದ ಸಾವು

ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕಿಯನ್ನು ಚಿಕಿತ್ಸೆ ಕೊಡಿಸಲೆಂದು ವಿಮಾನದಲ್ಲಿ ಮುಂಬೈಗೆ ಕರೆದುಕೊಂಡು ಹೋಗುವ ವೇಳೆ ಆಕೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ.

8-yr-old girl dies mid flight due to cardiac arrest
ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿ ಹೃದಯಾಘಾತದಿಂದ ಸಾವು
author img

By

Published : Jan 21, 2021, 11:46 AM IST

ನಾಗ್ಪುರ (ಮಹಾರಾಷ್ಟ್ರ): ಉತ್ತರ ಪ್ರದೇಶದ ಲಖನೌನಿಂದ ಮಹಾರಾಷ್ಟ್ರದ ಮುಂಬೈಗೆ ವಿಮಾನದಲ್ಲಿ ತಂದೆಯೊಂದಿಗೆ ಪ್ರಯಾಣಿಸುತ್ತಿದ್ದ ಎಂಟು ವರ್ಷದ ಬಾಲಕಿ ಹೃದಯಾಘಾತದಿಂದಾಗಿ ಮಾರ್ಗಮಧ್ಯೆ ಮೃತಪಟ್ಟಿದ್ದಾಳೆ.

ಮೃತ ಬಾಲಕಿಯನ್ನು ಉತ್ತರ ಪ್ರದೇಶದ ಸಿದ್ದಾರ್ಥ್​ ನಗರ ನಿವಾಸಿ ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಈಕೆಯನ್ನು ಚಿಕತ್ಸೆ ಕೊಡಿಸಲೆಂದು ಮುಂಬೈಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ, ಮಾರ್ಗಮಧ್ಯೆ ಆರೋಗ್ಯ ಇನ್ನಷ್ಟು ಹದಗೆಟ್ಟಿದ್ದು, ಗೋ ಏರ್ (GoAir) ವಿಮಾನವನ್ನು​ ಡಾ.ಬಾಬಾಸಾಹೇಬ್​ ಅಂಬೇಡ್ಕರ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಆದರೆ, ಬಾಲಕಿ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ದೇಗುಲದ ಆವರಣದಲ್ಲೇ ರಕ್ತಸಿಕ್ತ ಸ್ಥಿತಿಯಲ್ಲಿ ಅರ್ಚಕನ ಮೃತದೇಹ ಪತ್ತೆ

ಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.