ETV Bharat / bharat

ಬೆಂಗಳೂರಿನ ಅನಾಮಧೇಯ ಕಂಪನಿಯ ತೆರಿಗೆ ಕಳ್ಳಾಟ: ವಂಚಿಸಿದ್ದು ಬರೋಬ್ಬರಿ 880 ಕೋಟಿ ರೂ.! - 80ಜೆಜೆಎಎ ಪರಿಚ್ಛೇದ

ಮಾನವ ಸಂಪನ್ಮೂಲ ಸೇವಾ ಕಂಪನಿಯ 2 ಕ್ಯಾಂಪಸ್‌ಗಳ ಮೇಲೆ ಜುಲೈ 8ರಂದು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಕಂಪನಿಯು ಘೋಷಿಸಿಕೊಳ್ಳದೆ ಮರೆಮಾಚಿದ್ದ ಬರೋಬ್ಬರಿ 880 ಕೋಟಿ ರೂ. ಆದಾಯವನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ.

Income Tax
ತೆರಿಗೆ ಕಳ್ಳಾಟ
author img

By

Published : Jul 14, 2021, 10:05 AM IST

ನವದೆಹಲಿ: ಬೆಂಗಳೂರಿನ ಕಂಪನಿಯೊಂದರ ಮೇಲೆ ದಾಳಿ ನಡೆಸಿರುವ ಆದಾಯ ತೆರಿಗೆ ಅಧಿಕಾರಿಗಳು ಕಂಪನಿಯು ಘೋಷಿಸಿಕೊಳ್ಳದೆ ಮರೆಮಾಚಿದ್ದ ಬರೋಬ್ಬರಿ 880 ಕೋಟಿ ರೂ. ಆದಾಯವನ್ನು ಪತ್ತೆ ಮಾಡಿದ್ದಾರೆ. ಈ ಮೂಲಕ ಅನೇಕ ವರ್ಷಗಳಿಂದ ನಡೆಸುತ್ತಿದ್ದ ತೆರಿಗೆ ವಂಚನೆ ಕೃತ್ಯ ಬೆಳಕಿಗೆ ಬಂದಿದೆ.

ಮಾನವ ಸಂಪನ್ಮೂಲ ಸೇವಾ ಕಂಪನಿಯ 2 ಕ್ಯಾಂಪಸ್‌ಗಳ ಮೇಲೆ ಜುಲೈ 8ರಂದು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆದರೆ ಅದು ಯಾವ ಕಂಪನಿ ಎಂಬ ಮಾಹಿತಿಯನ್ನು ಸದ್ಯಕ್ಕೆ ಬಹಿರಂಗವಾಗಿಲ್ಲ.

ಆದಾಯ ತೆರಿಗೆ ಕಾಯ್ದೆಯಲ್ಲಿ 80ಜೆಜೆಎಎ ಎಂಬ ಪರಿಚ್ಛೇದವಿದೆ. ಇದರ ಅಡಿ ಉದ್ಯೋಗಿಗೆ 25 ಸಾವಿರ ರೂ.ಗಿಂತ ಕಡಿಮೆ ಸಂಬಳವನ್ನು ಕಂಪನಿ ನೀಡುತ್ತಿದ್ದರೆ, ಆ ಕಂಪನಿಗೆ ತೆರಿಗೆ ಕಟ್ಟುವುದರಿಂದ ವಿನಾಯಿತಿ ನೀಡಲಾಗುತ್ತದೆ. ಈಗ ಆಪಾದಿತ ಕಂಪನಿಯ ಮಾಲೀಕ ಇದೇ ಪರಿಚ್ಛೇದವನ್ನು ದುರ್ಬಳಕೆ ಮಾಡಿಕೊಂಡು 880 ಕೋಟಿ ರೂ. ಆದಾಯ ಮುಚ್ಟಿಟ್ಟು, ವಂಚನೆ ಮಾಡಿದ್ದಾನೆ ಎಂಬುದು ದಾಳಿ ವೇಳೆ ಪತ್ತೆಯಾಗಿದೆ.

ಈ ಕಂಪನಿಯಲ್ಲಿ ಮಾಸಿಕವಾಗಿ 25 ಸಾವಿರ ರೂ.ಗಿಂತ ಹೆಚ್ಚು ವೇತನ ಪಡೆಯುವ ಹಲವಾರು ಉದ್ಯೋಗಿಗಳಿದ್ದಾರೆ. ಆದರೆ ಈ ಉದ್ಯೋಗಿಗಳಿಗೆ 25 ಸಾವಿರಕ್ಕಿಂತ ಕಡಿಮೆ ಸಂಬಳ ನೀಡುತ್ತಿದ್ದೇವೆ ಎಂದು ಕಂಪನಿಯು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ, 80ಜೆಜೆಎಎ ಅಡಿ ತೆರಿಗೆ ವಿನಾಯಿತಿ ಕೊಡಿ ಎಂದು ಆದಾಯ ತೆರಿಗೆ ಇಲಾಖೆಗೆ ಮನವಿ ಸಲ್ಲಿಸಿ ನೂರಾರು ಕೋಟಿ ರೂಪಾಯಿ ತೆರಿಗೆ ಕಟ್ಟದೇ ಉಳಿಸಿಕೊಂಡಿದ್ದು ತಿಳಿದುಬಂದಿದೆ.

ಇದಲ್ಲದೆ, ಇನ್ನೂ ಕೆಲವರು ಈ ಕಂಪನಿಯ ನೌಕರರೇ ಅಲ್ಲದಿದ್ದರೂ, ಅಂಥವರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಅವರಿಗೂ 25 ಸಾವಿರ ರೂ.ಗಿಂತ ಕಡಿಮೆ ಸಂಬಳ ನೀಡುತ್ತಿರುವುದಾಗಿ ಇಲಾಖೆಗೆ ಮಾಹಿತಿ ನೀಡಲಾಗಿದೆ. ಹಲವಾರು ವರ್ಷಗಳಿಂದ ಈ ಕೃತ್ಯವನ್ನು ಕಂಪನಿ ಎಸಗಿದೆ ಎಂದು ಅಧಿಕಾರಿಗಳಿಗೆ ದಾಳಿ ಸಂದರ್ಭದಲ್ಲಿ ತಿಳಿದುಬಂದಿದೆ. ಈ ಮೂಲಕ ನಿಜವಾದ 880 ಕೋಟಿ ರೂ. ಆದಾಯ ಮರೆಮಾಚಿ ಅಷ್ಟು ಆದಾಯಕ್ಕೆ ಕಟ್ಟಬೇಕಿದ್ದ ತೆರಿಗೆಯನ್ನು ನೀಡದೆ ವಂಚನೆ ಎಸಗಲಾಗಿದೆ ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.