ಪುರಿ(ಒಡಿಶಾ): ಕಾಮುಕ ತಂದೆಯೋರ್ವ ಎರಡು ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಒಡಿಶಾದ ಪುರಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರೋಪಿಯನ್ನ ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಲಕಿ ಮೇಲೆ ಕಾಮುಕ ತಂದೆ ದುಷ್ಕೃತ್ಯವೆಸಗಿದ್ದಾನೆ. ಇದಕ್ಕೆ ಸಂಬಂಧಿಸಿದಂತೆ ಬಾಲಕಿ ತಾಯಿ ಪೊಲೀಸ್ ಠಾಣೆಗೆ ತೆರಳಿ ಗಂಡನ ವಿರುದ್ಧ ದೂರು ನೀಡಿದ್ದಾಳೆ. ಇದರ ಬೆನ್ನಲ್ಲೇ ಸೀ ಬೀಚ್ ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆಗೊಳಪಡಿಸಿರುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿರಿ: ಭಾರತದಲ್ಲಿ 95.3 ಕೋಟಿಗೂ ಅಧಿಕ ಮತದಾರರು.. ಇದರಲ್ಲಿ ಮಹಿಳೆಯರ ಸಂಖ್ಯೆ ಇಷ್ಟು___
ಬಾಲಕಿಯನ್ನ ಈಗಾಗಲೇ ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ. ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೆಚ್ಚುವರಿ ಎಸ್ಪಿ ಮಿಹಿರ್ ಪಾಂಡಾ ತಿಳಿಸಿದ್ದಾರೆ. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್ಗಳ ಅಡಿ ದೂರು ದಾಖಲು ಮಾಡಿಕೊಳ್ಳಲಾಗಿದೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ