ಮುಂಬೈ(ಮಹಾರಾಷ್ಟ್ರ): 20 ವರ್ಷದ ಯುವತಿಯೋರ್ವಳ ಮೇಲೆ ದುಷ್ಕರ್ಮಿಗಳು ಅತ್ಯಾಚಾರವೆಸಗಿ ಬಳಿಕ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ನಗರದ ಕುರ್ಲಾ ಪ್ರದೇಶದಲ್ಲಿ ನಡೆದಿದೆ ಎಂದು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ.
HDIL ಕಾಲೋನಿಯಲ್ಲಿ ಖಾಲಿಯಿರುವ ಕಟ್ಟಡದ 13ನೇ ಮಹಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಇದ್ದ ಮೃತದೇಹವನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ಪೊಲೀಸರ ಪ್ರಕಾರ, 18 ವರ್ಷದ ಹುಡುಗ ತನ್ನ ಇಬ್ಬರು ಸ್ನೇಹಿತರೊಂದಿಗೆ ಕಟ್ಟಡದಲ್ಲಿ ವಿಡಿಯೋ ಚಿತ್ರೀಕರಣ ನಡೆಸುತ್ತಿದ್ದಾಗ ಮೃತದೇಹ ಕಂಡಿದ್ದಾರೆ. ಆ ನಂತರ ಪೊಲೀಸರಿಗೆ ಕರೆ ಮಾಡಿ ಶವದ ಬಗ್ಗೆ ಮಾಹಿತಿ ನೀಡಲಾಗಿದೆ.
ವಿನೋಬಾ ಭಾವೆ ಠಾಣೆಯ ಪೊಲೀಸರು ಭಾರತೀಯ ದಂಡ ಸಂಹಿತೆ 376 ಮತ್ತು 302ರ ಅಡಿಯಲ್ಲಿ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ.
ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ಹೆಚ್ಚುತ್ತಿವೆ ಮಹಿಳೆಯರು, ಯುವತಿಯರ ನಾಪತ್ತೆ ಪ್ರಕರಣಗಳು