ಕೊಲ್ಲಂ (ಕೇರಳ) : ಭಾರತದಲ್ಲಿ ಅತ್ಯಾಚಾರ ಪ್ರಕರಣ ಹೆಚ್ಚುತ್ತಿವೆ. ಬಾಲಕಿಯರು, ಯುವತಿಯರು, ಮಹಿಳೆಯರು ಅಷ್ಟೇ ಅಲ್ಲ, ಹಸುಗೂಸು ಮತ್ತು ವೃದ್ಧೆಯರ ಮೇಲೂ ಕಾಮುಕರು ಎರಗಿ ವಿಕೃತಿ ಮೆರೆಯುತ್ತಿದ್ದಾರೆ. ಇದೀಗ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ 32 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.
ಕೊಲ್ಲಂನ ಚೇವರಂಬಲಂ ಪ್ರದೇಶದಲ್ಲಿ ಮಂಗಳವಾರ ರಾತ್ರಿ ನಾಲ್ವರು ದುರುಳರು ಮಹಿಳೆ ಮೇಲೆ ಅತ್ಯಾಚಾರ ನಡೆಸಿದ್ದು, ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಸಂತ್ರಸ್ತೆಯನ್ನು ಕೋಯಿಕ್ಕೋಡ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತ್ರಸ್ತೆ ಹೇಳಿಕೆಯ ಮೇರೆಗೆ ಚೇವಯೂರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಅಜ್ನಾಸ್ ಮತ್ತು ಫಹಾದ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ದೇಶದಲ್ಲಿ ನಿಲ್ಲದ ಕಾಮುಕರ ಕ್ರೌರ್ಯ: ಮುಂಬೈನಲ್ಲಿ ಅತ್ಯಾಚಾರವೆಸಗಿ ಖಾಸಗಿ ಭಾಗಕ್ಕೆ ರಾಡ್ ಹಾಕಿ ವಿಕೃತಿ!
ಮಸಾಜ್ ಸೆಂಟರ್ ಆರಂಭಿಸುವುದಾಗಿ ಹೇಳಿ ಆರೋಪಿಗಳು ಮಹಿಳೆಯನ್ನು ಕೋಯಿಕ್ಕೋಡ್ಗೆ ಕರೆತಂದಿದ್ದರು. ಅಲ್ಲಿಂದ ಆಕೆಯನ್ನು ಚೇವರಂಬಲಂನಲ್ಲಿರುವ ಹೋಟೆಲ್ವೊಂದಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ತಲೆಮರೆಸಿಕೊಂಡಿರುವ ಮತ್ತಿಬ್ಬರು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಇದನ್ನೂ ಓದಿ: ಅಪ್ರಾಪ್ತ ಮಗಳ ಮೇಲೆ ಮೂರು ವರ್ಷಗಳ ಕಾಲ ಅತ್ಯಾಚಾರ: ಅಪರಾಧಿಗೆ ಮೂರು ಜೀವಾವಧಿ ಶಿಕ್ಷೆ