ವಿರುಧುನಗರ, ತಮಿಳುನಾಡು: ಏಳು ಜನರ ತಂಡವೊಂದು ಕಾರಿನಲ್ಲಿ ಮನೆಗೆ ಹಿಂತಿರುಗುತ್ತಿದ್ದ 40 ವರ್ಷದ ಮಹಿಳೆಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ತಡವಾಗಿ ಬೆಳಕಿಗೆ ಬಂದಿದೆ. ಆಗಸ್ಟ್ 22 ರಂದು ಅರುಪ್ಪುಕೊಟ್ಟೈ ಬಳಿ ಈ ಘಟನೆ ನಡೆದಿದ್ದು, ಆಗಸ್ಟ್ 23 ರಂದು ಬಾಲಾಪರಾಧಿ ಸೇರಿ ಐವರ ಬಂಧನವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಸಂತ್ರಸ್ತೆ ತನ್ನ ನೆರೆಹೊರೆಯವರೊಂದಿಗೆ ಆಗಸ್ಟ್ 22 ರಂದು ಸಂಜೆ ತನ್ನ ಮನೆಗೆ ಹೋಗುತ್ತಿದ್ದಾಗ, 7 ಜನರ ತಂಡವು ಇತರ ವಾಹನಗಳ ಮೂಲಕ ಅವರನ್ನು ಹಿಂಬಾಲಿಸಿದೆ. ದ್ವಿಚಕ್ರ ವಾಹನದಲ್ಲಿ ಆರೋಪಿಗಳು ಆಕೆಯ ನೆರೆಹೊರೆಯವರ ಮೇಲೆ ದಾಳಿ ಮಾಡಿದೆ. ನಂತರ ಮಹಿಳೆಯನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದಲ್ಲದೇ, ಹಲ್ಲೆ ನಡೆಸಿದೆ. ಬಳಿಕ ಏಳು ಆರೋಪಿಗಳು ಹಣ ಮತ್ತು ಚಿನ್ನಾಭರಣ ದೋಚಿ ಸ್ಥಳದಿಂದ ಪರಾರಿಯಾಗಿದ್ದರು.
ಈ ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿತ್ತು. ಕಾರ್ಯಪ್ರವೃತ್ತರಾದ ನಮ್ಮ ಪಡೆ ಬಾಲಪರಾಧಿ ಸೇರಿ ಐವರನ್ನು ಬಂಧಿಸಿದೆ. ಇನ್ನುಳಿದವರ ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಓದಿ: ಯುಪಿಯಲ್ಲಿ ನಿರ್ಭಯಾ ಮಾದರಿ ಕೇಸ್: ವಿದ್ಯಾರ್ಥಿನಿ ಮೇಲೆ ಕಾಮುಕರಿಂದ ರೇಪ್, ಬೆತ್ತಲೆಗೊಳಿಸಿ ಥಳಿತ