ಸಿಂಧುದುರ್ಗ(ಮಹಾರಾಷ್ಟ್ರ): 20 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಮುಳುಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ಸಿಂಧುದುರ್ಗ ಜಿಲ್ಲೆಯಲ್ಲಿ ನಡೆದಿದೆ. ಅಲ್ಲದೇ, ನಾಲ್ವರು ಪ್ರವಾಸಿಗರ ಸ್ಥಿತಿ ಚಿಂತಾಜನಕವಾಗಿದ್ದು, ಮಾಲ್ವಾನ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇಲ್ಲಿನ ಮಾಲ್ವಾನ್ ತರ್ಕರ್ಲಿ ಬೀಚ್ನಲ್ಲಿ ಪ್ರವಾಸಿಗರು ಸ್ಕೂಬಾ ಡೈವಿಂಗ್‌ಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ದೋಣಿ ಮುಳುಗುತ್ತಿದ್ದನ್ನು ಕಂಡ ಸ್ಥಳೀಯರು ತಕ್ಷಣವೇ ಧಾವಿಸಿ 20 ಪ್ರವಾಸಿಗರ ಪೈಕಿ 18 ಪ್ರವಾಸಿಗರನ್ನು ರಕ್ಷಿಸಲಾಗಿದೆ. ಇದರಲ್ಲಿ 14 ಪ್ರವಾಸಿಗರು ಸುರಕ್ಷಿತವಾಗಿದ್ದಾರೆ. ಭಾರಿ ಗಾಳಿಯಿಂದಾಗಿ ದೋಣಿ ನೀರಿನಲ್ಲಿ ಮುಳುಗಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಮಾಹಿತಿ ಪಡೆದ ಮಾಲ್ವಾನ್ ಪೊಲೀಸರು ಸ್ಥಳಕ್ಕೆ ಬಂದು ಪರಿಹಾರ ಕಾರ್ಯ ಕೈಗೊಂಡಿದ್ದಾರೆ. ಕರಾವಳಿ ಪ್ರದೇಶಗಳಲ್ಲಿ ಕೆಟ್ಟ ವಾತಾವರಣ ಮತ್ತು ಗಾಳಿಯಿಂದಾಗಿ ಪ್ರಸ್ತುತ ಸ್ಕೂಬಾ ಡೈವಿಂಗ್ ನಿಷೇಧಿಸಲಾಗಿದೆ. ಆದರೂ, ಸ್ಕೂಬಾ ಡೈವಿಂಗ್‌ಗಾಗಿ ಸಮುದ್ರಕ್ಕೆ ಪ್ರವಾಸಿಗರನ್ನು ಕರೆದೊಯ್ದ ದೋಣಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಮೂರು ಬಾರಿ ಕಟ್ಟಿದ್ರು, ಮತ್ತೆ ಕುಸಿತ.. ಬೆಳ್ಳೂಡಿ-ರಾಮತೀರ್ಥ ಸೇತುವೆಗೆ ಬೇಕಿದೆ ಕಾಯಕಲ್ಪ