ETV Bharat / bharat

ಕಾಣೆಯಾಗಿದ್ದ ಯುವತಿ ಗೋವಾ ಬೀಚ್​​ನಲ್ಲಿ ಶವವಾಗಿ ಪತ್ತೆ

author img

By

Published : Aug 12, 2021, 3:49 PM IST

Updated : Aug 12, 2021, 11:19 PM IST

ಗೋವಾದ ಬೀಚ್​​ವೊಂದರಲ್ಲಿ 19 ವರ್ಷದ ಯುವತಿದ ಮೃತದೇಹ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮುಳುಗಿ ಸಾವನ್ನಪ್ಪಿದ್ದಾಳೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Goa beach
Goa beach

ಪಣಜಿ(ಗೋವಾ): ಕಳೆದ ಕೆಲ ದಿನಗಳ ಹಿಂದೆ ಗೋವಾದ ಬೀಚ್​ವೊಂದರಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆದಿರುವ ಅಮಾನವೀಯ ಘಟನೆ ಅತಿ ಹೆಚ್ಚು ಚರ್ಚೆಗೆ ಗ್ರಾಸವಾಗಿತ್ತು. ಗೋವಾ ಸದನದಲ್ಲೂ ಇದೇ ವಿಷಯವನ್ನಿಟ್ಟುಕೊಂಡು ಆಡಳಿತ ಪಕ್ಷದ ವಿರುದ್ಧ ವಿರೋಧ ಪಕ್ಷಗಳು ವಾಗ್ದಾಳಿ ನಡೆಸಿದ್ದವು. ಇದರ ಬೆನ್ನಲ್ಲೇ ಹದಿಹರೆಯದ ಯುವತಿಯೊಬ್ಬಳ ಮೃತದೇಹ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಗೋವಾದ ಕಲಂಗುಟ್ ಬೀಚ್​ನಲ್ಲಿ 19 ವರ್ಷದ ಯುವತಿಯ ಮೃತದೇಹ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತದೇಹವನ್ನ ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಈಗಾಗಲೇ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿತ್ತು. ಲಭ್ಯವಾಗಿರುವ ವರದಿ ಪ್ರಕಾರ ಬೀಚ್​ನಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಯುವತಿ ನಿನ್ನೆ ಬೆಳಗ್ಗೆಯಿಂದಲೇ ಕಾಣೆಯಾಗಿದ್ದಳು. ಪರವಾರಿ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದ ಆಕೆ ಮಾಪುಸಾ ಗ್ರೀನ್ ಪಾರ್ಕ್​ ಜಂಕ್ಷನ್​ನಿಂದ ನಾಪತ್ತೆಯಾಗಿದ್ದಳು. ಅದಕ್ಕೂ ಮುಂಚಿತವಾಗಿ ತಂದೆ ಜೊತೆಗೆ ತಾನು ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಬಸ್​ನಲ್ಲಿ ಡ್ರಾಪ್​ ತೆಗೆದುಕೊಂಡಿದ್ದಳು ಎನ್ನಲಾಗಿದೆ.​​

ಇದನ್ನೂ ಓದಿರಿ: ಒಂದೇ ಕುಟುಂಬದ ನಾಲ್ವರಿಗೆ ಕಚ್ಚಿದ ಹಾವು... ತಾಯಿ ಸಾವು, ಮೂವರು ಮಕ್ಕಳ ಸ್ಥಿತಿ ಗಂಭೀರ

ಆದರೆ, ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅಂಗಡಿ ಮಾಲೀಕ, ಯುವತಿ ಕೆಲಸಕ್ಕೆ ಶಾಪ್​ಗೆ ಬಂದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಇನ್ನು ಸಿದ್ಧಿ ಬಳಕೆ ಮಾಡುತ್ತಿದ್ದ ಮೊಬೈಲ್ ಫೋನ್​​ ಮನೆಯಲ್ಲೇ ಬಿಟ್ಟು ಹೋಗಿದ್ದಳು. ಇದಕ್ಕೆ ಸಂಬಂಧಿಸಿದಂತೆ ಯುವತಿ ತಂದೆ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲು ಮಾಡಿದ್ದರು.

Last Updated : Aug 12, 2021, 11:19 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.