ನೋಯ್ಡಾ: ನೋಯ್ಡಾದ ಸೆಕ್ಟರ್ 63 ರಲ್ಲಿರುವ ಚಿಜರಸಿ ಮುಖ್ಯ ರಸ್ತೆಯಲ್ಲಿ ಬಾಂಬ್ ತರಹದ ವಸ್ತುವೊಂದು ಪತ್ತೆಯಾಗಿತ್ತು. ಇದರಿಂದ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಉನ್ನತ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದು, ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನಗಳನ್ನು ಬೇರೊಂದು ಮಾರ್ಗವಾಗಿ ತೆರಳಲು ವ್ಯವಸ್ಥೆ ಮಾಡಲಾಗಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದ ಸುತ್ತಮುತ್ತ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು.
ಇದರ ಜೊತೆಗೆ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳ ಸಿಬ್ಬಂದಿ ಕೂಡ ಸ್ಥಳಕ್ಕೆ ಆಗಮಿಸಿ ಪರಿಶಿಲನೆ ನಡೆಸಿದ್ದರು. ಈ ವೇಳೆ ಅದರಲ್ಲಿ ಯಾವುದೇ ಸ್ಫೋಟಕ ಇಲ್ಲ. ಯಾರೋ ಕಿಡಿಗೇಡಿಗಳು ಈ ವಸ್ತುವನ್ನು ಇಟ್ಟಿರಬಹುದು ಎಂದು ತಿಳಿಸಿದರು. ಇನ್ನೂ ಈ ಬಗ್ಗೆ ತನಿಖೆ ನಡೆಸಲು ಅಧಿಕಾರಿಗಳು ಲ್ಯಾಬ್ಗೆ ಕಳುಹಿಸಿದ್ದಾರೆ.
ರಸ್ತೆಯಲ್ಲಿ ಇಟ್ಟಿದ್ದ ವಸ್ತು ತೆರವುಗೊಳಿಸಿದ ಬಳಿಕ ವಾಹನಗಳ ಸಂಚಾರಕ್ಕೆ ಪೊಲೀಸರು ಅನುವು ಮಾಡಿ ಕೊಟ್ಟರು.