ಹೈದರಾಬಾದ್: ರಂಗಾರೆಡ್ಡಿ ಜಿಲ್ಲೆಯ ಶಂಶಾಬಾದ್ ಬಳಿ ಲಾರಿ ಮತ್ತು ಕಾರಿನ ನಡುವೆ ಪರಸ್ಪರ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಸಾವಿಗೀಡಾಗಿದ್ದಾರೆ.
ಶಂಶಾಬಾದ್ ಮಾರುಕಟ್ಟೆಯಿಂದ ವಾಪಸ್ ಬರುತ್ತಿದ್ದ ಲಾರಿ ಹಾಗೂ ಎದುರಿನಿಂದ ಬಂದ ಕಾರಿನ ನಡುವೆ ಅಪಘಾತ ನಡೆದಿದೆ.
ದುರ್ಘಟನೆಯಲ್ಲಿ 15 ಜನರು ಗಾಯಗೊಂಡಿದ್ದಾರೆ. ಅಪಘಾತದ ವೇಳೆ ಲಾರಿಯಲ್ಲಿ 30 ಮಂದಿ ತರಕಾರಿ ಮಾರಾಟಗಾರರು ಇದ್ದರು ಎನ್ನಲಾಗಿದೆ.