ನೆಲ್ಲೂರು, ಆಂಧ್ರಪ್ರದೇಶ : ಕಾರೊಂದು ನೋಡು ನೋಡುತ್ತಲೇ ಕೆಲವೇ ಕ್ಷಣಗಳಲ್ಲಿ ಬೆಂಕಿಗಾಹುತಿಯಾದ ಘಟನೆ ಆಂಧ್ರಪ್ರದೇಶ ನೆಲ್ಲೂರು ನಗರದ ಪೊದಲಕೂರು ಎಂಬಲ್ಲಿ ನಡೆದಿದೆ. ಈ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಲಿಕ್ಕರ್ ಶಾಪ್ನ ಮುಂದೆ ನಿಂತಿದ್ದ ಕಾರಿನ ಮೇಲೆ ಅಪರಿಚಿತ ವ್ಯಕ್ತಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ಶಂಕಿಸಲಾಗುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದರೂ, ಯಾವುದೇ ಪ್ರಯೋಜನವಾಗಲಿಲ್ಲ.
ಅದೃಷ್ಟವಶಾತ್ ಕಾರಿನಲ್ಲಿ ಯಾರೂ ಇರಲಿಲ್ಲ ಎಂದು ತಿಳಿದು ಬಂದಿದೆ. ಸ್ಥಳದಲ್ಲಿದ್ದವರಿಗೂ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ. ಲಿಕ್ಕರ್ ಅಂಗಡಿಯ ಮಾಲೀಕರು ಮತ್ತು ಕಾರಿನ ಮಾಲೀಕರ ನಡುವಿನ ವಿವಾದದ ಕಾರಣದಿಂದಾಗಿ ಈ ಘಟನೆ ನಡೆದಿದೆ ಎಂದು ಸ್ಥಳೀಯರು ಹೇಳಿದ್ದು, ಹೆಚ್ಚಿನ ಮಾಹಿತಿ ಬರಬೇಕಿದೆ.
ಇದನ್ನೂ ಓದಿ: Watch Video - ಜಿಮ್‌ಗೆ ನುಗ್ಗಿ ಯುವಕನಿಗೆ ಥಳಿಸಿದ ದುಷ್ಕರ್ಮಿಗಳು