ಸಾಂಗ್ಲಿ(ಮಹಾರಾಷ್ಟ್ರ): ಸಾಂಗ್ಲಿಯಲ್ಲಿ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿದೆ. ವ್ಯಾಪಾರಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಹರ್ಬತ್ ರಸ್ತೆಯಲ್ಲಿ ಸಿಎಂ ಉದ್ಧವ್ ಠಾಕ್ರೆ ಅವರ ಬೆಂಗಾವಲು ವಾಹನವನ್ನು ತಡೆದು ನಿಲ್ಲಿಸಲು ಯತ್ನಿಸಿದರು. ಈ ವೇಳೆ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಘರ್ಷಣೆ ನಡೆಯಿತು.
ಪೊಲೀಸರು ಲಘು ಲಾಠಿ ಚಾರ್ಜ್ ಮಾಡುವ ಮೂಲಕ ಗುಂಪನ್ನು ಚದುರಿಸಲು ಪ್ರಯತ್ನಿಸಿದರು. ಇದು ಕೆಲ ಕಾಲ ಉದ್ವಿಗ್ನತೆಯನ್ನು ಸೃಷ್ಟಿಸಿತು. ಬಿಜೆಪಿ ಮತ್ತು ಶಿವಸೇನೆ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಲೇ ಇದ್ದರು. ಬಿಜೆಪಿ ನೀಡಿದ ಹೇಳಿಕೆಗಳನ್ನು ಮುಖ್ಯಮಂತ್ರಿಯವರು ಒಪ್ಪಿಕೊಳ್ಳಲಿಲ್ಲ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದಿದ್ದಾರೆ.
ಸಾಂಗ್ಲಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಇಂದು ಭೇಟಿ ನೀಡಲು ತೆರಳುತ್ತಿದ್ದರು.
ಇದನ್ನೂ ಓದಿ:ಸಚಿವರ ಪಟ್ಟಿಗೆ ಕೇಂದ್ರ ನಾಯಕರು ಒಪ್ಪಿಗೆ ನೀಡಿದ್ರೆ ಬುಧವಾರ ಸಂಪುಟ ರಚನೆ: ಸಿಎಂ ಬೊಮ್ಮಾಯಿ