ನವದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ನಿಯೋಗ ಗುರುವಾರ ನಿರ್ವಚನ ಸದನದಲ್ಲಿ ಭಾರತೀಯ ಚುನಾವಣಾ ಆಯೋಗವನ್ನು ಭೇಟಿ ಮಾಡಿತು.
ಈ ನಿಯೋಗದಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಎಂ ಬಿ ಪಾಟೀಲ್, ವಿಧಾನ ಪರಿಷತ್ ಸದಸ್ಯ ನಜೀರ್ ಅಹಮದ್, ಕಾಂಗ್ರೆಸ್ ವಕ್ತಾರ ಪ್ರಿಯಾಂಕ್ ಖರ್ಗೆ, ನಾಸೀರ್ ಹುಸೇನ್, ಪ್ರಣವ್ ಝಾ, ವಿನೀತ್ ಪುನಿಯಾ ಇದ್ದರು.
ಚಿಲುಮೆ ಎಜುಕೇಶನ್ ಇನ್ಸ್‌ಟಿಟ್ಯೂಟ್ ಎಂಬ ಸಂಸ್ಥೆಯ ಮೂಲಕ ಮತದಾರರ ಪಟ್ಟಿ ಪರಿಷ್ಕರಣೆ ನೆಪದಲ್ಲಿ ಮತದಾರರ ಮಾಹಿತಿ ಕಳ್ಳತನ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ನಿಯೋಗ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.
ಇದನ್ನೂ ಓದಿ: ಮತದಾರರ ಮಾಹಿತಿ ಕಳ್ಳತನ ಆರೋಪ: ಸಮಗ್ರ ತನಿಖೆಗೆ ಸಿಎಂ ಸೂಚನೆ