ETV Bharat / bharat

ಹರಿಯಾಣ ಘಟನೆ ಬಳಿಕ ಜಾರ್ಖಂಡ್‌ನಲ್ಲಿ ಮಹಿಳಾ ಪಿಎಸ್ಐ ಹತ್ಯೆ! - woman police officer died in Jharkhand

ಜಾರ್ಖಂಡ್​ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಮಹಿಳಾ ಪೊಲೀಸ್​ ಅಧಿಕಾರಿ ಮೇಲೆ ವಾಹನ ಹರಿದು ಅವರು ಸಾವಿಗೀಡಾಗಿದ್ದಾರೆ. ಆರೋಪಿ ಚಾಲಕನನ್ನು ಬಂಧಿಸಿ ವಾಹನ ಜಪ್ತಿ ಮಾಡಲಾಗಿದೆ.

ಹರಿಯಾಣ ಡಿಎಸ್​ಪಿ ಮಾದರಿ ಜಾರ್ಖಂಡ್​ ಮಹಿಳಾ ಪಿಎಸ್​ಐ ಹತ್ಯೆ

author img

By

Published : Jul 20, 2022, 9:29 AM IST

Updated : Jul 20, 2022, 12:00 PM IST

ರಾಂಚಿ: ಅಕ್ರಮ ಕಲ್ಲು ಗಣಿಗಾರಿಕೆಯನ್ನು ಪ್ರಶ್ನಿಸಿದ್ದಕ್ಕೆ ಹರಿಯಾಣದಲ್ಲಿ ಡಿಎಸ್​ಪಿ ಮೇಲೆ ವಾಹನ ಹರಿಸಿ ಕೊಲೆ ಮಾಡಿದ ಘಟನೆ ನಡುವೆಯೇ ಅಂಥಹದ್ದೇ ಇನ್ನೊಂದು ಕೃತ್ಯ ಜಾರ್ಖಂಡ್​ನಲ್ಲಿ ಬೆಳಕಿಗೆ ಬಂದಿದೆ. ರಾತ್ರಿ ವೇಳೆ ವಾಹನ ತಪಾಸಣೆ ನಡೆಸುತ್ತಿದ್ದ ಮಹಿಳಾ ಪಿಎಸ್​ಐ ಅನ್ನು ವಾಹನ ಹರಿಸಿ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ವಾಹನ ತಪಾಸಣೆಯ ಸಂದರ್ಭದಲ್ಲಿ ಮಹಿಳಾ ಸಬ್ ಇನ್ಸ್‌ಪೆಕ್ಟರ್ ಸಂಧ್ಯಾ ಟೋಪ್ನೋ ಸಾವನ್ನಪ್ಪಿದ್ದಾರೆ. ಇವರನ್ನು ತೂಪುದಾನ ಪ್ರದೇಶದ ಪ್ರಭಾರಿಯಾಗಿ ನೇಮಿಸಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಂಚಿ ಪೊಲೀಸರು ತಿಳಿಸಿದ್ದಾರೆ.

ಹರಿಯಾಣದಲ್ಲಿ ನಿನ್ನೆ ಅಕ್ರಮವಾಗಿ ನಡೆಸಲಾಗುತ್ತಿದ್ದ ಗಣಿ ಪ್ರದೇಶಕ್ಕೆ ತೆರಳಿ ತಪಾಸಣೆ ನಡೆಸುತ್ತಿದ್ದಾಗ ಪೊಲೀಸ್ ವಾಹನದ ಮೇಲೆ ಟ್ರಕ್​ ಹತ್ತಿಸಿ ಡಿಎಸ್​ಪಿಯನ್ನು ದಾರುಣವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯ ಮೇಲೆ ಗುಂಡು ಹಾರಿಸಿ ಬಂಧಿಸಲಾಗಿದೆ.

ಇದನ್ನೂ ಓದಿ: ಟ್ರಕ್​ ಹರಿಸಿ ಡಿಎಸ್​​ಪಿ ಹತ್ಯೆ ಪ್ರಕರಣ: ಒಬ್ಬ ಆರೋಪಿ ಮೇಲೆ ಗುಂಡು ಹಾರಿಸಿದ ಪೊಲೀಸರು

Last Updated : Jul 20, 2022, 12:00 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.