ನವದೆಹಲಿ: ಹರಿದ್ವಾರದಲ್ಲಿ ಮಹಾಕುಂಭಮೇಳ ನಡೆಯುತ್ತಿದೆ. ಶಾಯಿ ಸ್ನಾನದಲ್ಲಿ ಲಕ್ಷಾಂತರ ಭಕ್ತರು ಪಾಲ್ಗೊಂಡಿದ್ದಾರೆ. ಮಹಾಕುಂಭದಲ್ಲಿ ಈಗಾಗಲೇ ದಿನವೊಂದಕ್ಕೆ 2,500 ಹೆಚ್ಚು ಭಕ್ತರಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಕುಂಭಮೇಳ ಆಯೋಜಕರಿಗೆ ಕಠಿಣ ನಿರ್ದೇಶನ ನೀಡುವಂತೆ ವಕೀಲರೊಬ್ಬರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ಹರಿದ್ವಾರ ಕುಂಭಮೇಳಕ್ಕೆ ಆಗಮಿಸುವಂತೆ ನೀಡಲಾಗಿರುವ ಜಾಹೀರಾತುಗಳಿಗೆ ತಡೆ ನೀಡುವಂತೆ ವಕೀಲರು ಸುಪ್ರೀಂಕೋರ್ಟ್ಗೆ ಮನವಿ ಮಾಡಿದ್ದಾರೆ. ಈಗಾಗಲೇ ದೊರೆತಿರುವ ಅಂಕಿ-ಅಂಶಗಳು ಅಲ್ಲಿನ ಪರಿಸ್ಥಿತಿ ಬಿಗಡಾಯಿಸುತ್ತಿರುವುದನ್ನು ಎತ್ತಿ ತೋರುತ್ತಿವೆ. ಹಾಗಾಗಿ ಅಲ್ಲಿ ಅತ್ಯಂತ ಕಠಿಣ ನಿಯಮಗಳನ್ನ ಜಾರಿ ಮಾಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿಕೊಂಡಿದ್ದಾರೆ.
ಇದನ್ನೂ ಓದಿ: ಕೊರೊನಾ ಉಲ್ಬಣ ಹಿನ್ನೆಲೆ ಸಾಂಕೇತಿಕ ಕುಂಭಮೇಳ ನಡೆಸಲು ಮೋದಿ ಮನವಿ
ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳ ಕೊರೊನಾ ಹೆಚ್ಚಳಕ್ಕೆ ಕಾರಣವಾಗುತ್ತಿದೆ ಎಂಬ ಆರೋಪಗಳ ಬೆನ್ನಲ್ಲೇ ಪ್ರಧಾನಿ ಮೋದಿ ಸಾಂಕೇತಿಕ ಕುಂಭಮೇಳ ನಡೆಸಲು ಮೋದಿ ಮನವಿ ಮಾಡಿದ್ದಾರೆ. ಈ ಸಂಬಂಧ ಹಿಂದೂ ಆಚಾರ್ಯ ಸಭಾದ ಅಧ್ಯಕ್ಷ ಸ್ವಾಮಿ ಅವಧೇಶಾನಂದ ಗಿರಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿರುವುದಾಗಿ ಪ್ರಧಾನಿ ಮೋದಿ ತಿಳಿಸಿದ್ದಾರೆ. ಹೆಚ್ಚುತ್ತಿರುವ ಕೋವಿಡ್ 19 ಪ್ರಕರಣಗಳಿಂದಾಗಿ ಕುಂಭಮೇಳವನ್ನು ಸಾಂಕೇತಿಕವಾಗಿರಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಮನವಿ ಮಾಡಿದ್ದಾರೆ.