ಅಕೋಲಾ(ಮಹಾರಾಷ್ಟ್ರ): ಹದಿನಾಲ್ಕು ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಅಕೋಲಾದ ಖಾದಾನ್ ಪೊಲೀಸರು ಆರೋಪಿ ಗಣೇಶ್ ಕುಮ್ರೆಯನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯನ್ನು ನವೆಂಬರ್ 21ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಇದಕ್ಕೂ ಮೊದಲು, ತನ್ನ ಅಪ್ರಾಪ್ತಳ ಮೇಲೆ ಲೈಂಗಿಕ, ದೈಹಿಕ ಮತ್ತು ಮಾನಸಿಕವಾಗಿ ಕಿರುಕುಳ ನೀಡಿದವರ ವಿರುದ್ಧ ದೂರನ್ನು ತೆಗೆದುಕೊಳ್ಳಲು ಪ್ರಾರಂಭದಲ್ಲಿ ಪೊಲೀಸರು ನಿರಾಕರಿಸಿದ್ದರು ಎಂದು ಬಾಲಕಿಯ ತಂದೆ ಆರೋಪಿಸಿದ್ದಾರೆ. ಹೀಗಾಗಿ ಅವರಿಗೆ ನೈತಿಕ ಧೈರ್ಯ ಹಾಗೂ ರಕ್ಷಣೆ ನೀಡುವಂತೆ ಒತ್ತಾಯಿಸಿ ವಂಚಿತ್ ಬಹುಜನ ಅಘಾಡಿ ಸಂಸ್ಥೆಯ ಪದಾಧಿಕಾರಿಗಳು ಪೊಲೀಸ್ ಠಾಣೆಗೆ ಆಗಮಿಸಿದ್ದರು. ಬಾಲಕಿಯ ಹೇಳಿಕೆಯನ್ನು ಪೊಲೀಸರು ಪಡೆಯುತ್ತಿರುವಾಗ ಆರೋಪಿ ಗಣೇಶ್ ಕುಮ್ರೆ ಠಾಣೆಯಲ್ಲಿಯೇ ಬಾಲಕಿ ಮತ್ತು ಆಕೆಯ ತಂದೆಗೆ ಬೆದರಿಕೆ ಹಾಕಿದ್ದಾನೆ ಎಂದು ವಾಂಚಿತ್ ಬಹುಜನ ಅಘಾಡಿ ಸಂಸ್ಥೆ ಆರೋಪಿಸಿದೆ. ಸಂತ್ರಸ್ತ ಬಾಲಕಿಗೆ ಕಳೆದ ಎರಡು ವರ್ಷಗಳಿಂದ ಆರೋಪಿ, ಜೀವ ಬೆದರಿಕೆ ಹಾಕಿ, ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.
ಅಕೋಲಾದ ಪೊಲೀಸ್ ಅಧಿಕಾರಿ ಅಭಯ್ ಡೋಂಗ್ರೆ ಪ್ರತಿಕ್ರಿಯಿಸಿ, "ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದ್ದು, ಆತನಿಗೆ ಪಿಸಿಆರ್ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಆರೋಪಿಯನ್ನು 4 ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗಿದೆ. ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ನಡೆಯುತ್ತಿದ್ದು, ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು" ಎಂದು ತಿಳಿಸಿದರು.
ಬಾಲಕಿಯ ಮೇಲೆ ಆರೋಪಿಯಿಂದ ಪೈಶಾಚಿಕ ಕ್ರೌರ್ಯ: ಆರೋಪಿ ಎರಡು ದಿನಗಳ ಹಿಂದೆ ಸಂತ್ರಸ್ತೆಯ ಕೈಗೆ ಸಿಗರೇಟಿನಿಂದ ಸುಟ್ಟು, ಆಕೆಯ ಕೂದಲು ಕತ್ತರಿಸಿದ್ದ. ಜೊತೆಗೆ ಸ್ಮಶಾನದಲ್ಲಿ ಆಕೆಯನ್ನು ವಿವಸ್ತ್ರಗೊಳಿಸಲಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ: 5ನೇ ತರಗತಿ ವಿದ್ಯಾರ್ಥಿನಿ ಅತ್ಯಾಚಾರ.. ಆರೋಪಿಯನ್ನು ಒಪ್ಪಿಸುವಂತೆ ಆಗ್ರಹಿಸಿ ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ವಿದ್ಯಾರ್ಥಿನಿ ಮೇಲೆ ಅತ್ಯಾಚಾರ(ಒಡಿಶಾ): ಇತ್ತೀಚೆಗೆ, ಆಶ್ರಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಮುಖ್ಯೋಪಾಧ್ಯಾಯ ಸೇರಿದಂತೆ ಇಬ್ಬರು ಶಿಕ್ಷಕರು ಸೇರಿಕೊಂಡು ಸಾಮೂಹಿಕ ಅತ್ಯಾಚಾರವೆಸಗಿದ್ದ ಘಟನೆ ಒಡಿಶಾದ ನಬರಂಗಪುರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನೂ ಪೊಲೀಸರು ಬಂಧಿಸಿದ್ದರು. ರಾಯಗಢ ಪೊಲೀಸ್ ಠಾಣೆ ವ್ಯಾಪ್ತಿಯ ಆಶ್ರಮ ಶಾಲೆಯಲ್ಲಿ 11 ವರ್ಷದ ಸಂತ್ರಸ್ತ ಬಾಲಕಿ ಓದುತ್ತಿದ್ದಳು. ನವೆಂಬರ್ 7ರಂದು ಈ ಹೇಯ ಘಟನೆ ನಡೆದಿತ್ತು.
ಮರು ದಿನ ಸಂತ್ರಸ್ತೆ ತೀವ್ರವಾಗಿ ಅಸ್ವಸ್ಥಗೊಂಡಿದ್ದಳು. ಇದರಿಂದ ಮಗಳ ಅಸ್ವಸ್ಥತೆಯ ವಿಷಯವನ್ನು ಪೋಷಕರಿಗೆ ತಿಳಿಸಲಾಗಿತ್ತು. ನೋವಿನಿಂದ ಬಳಲುತ್ತಿದ್ದ ಮಗಳನ್ನು ಕುಟುಂಬಸ್ಥರು ಚಿಕಿತ್ಸೆಗೆಂದು ವೈದ್ಯಕೀಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದರು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು.