ETV Bharat / bharat

ಗಾಯಗೊಂಡು ಅರೆಪ್ರಜ್ಞಾವಸ್ಥೆಯಲ್ಲಿದ್ದ ವ್ಯಕ್ತಿ ಮೇಲೆ ಮೂತ್ರ ವಿಸರ್ಜನೆ: ಓರ್ವನ ಬಂಧನ - ಮೂತ್ರ ವಿಸರ್ಜನೆ

ಉತ್ತರ ಪ್ರದೇಶದ ಆಗ್ರಾದಲ್ಲಿ ಗಾಯಗೊಂಡು ಅರೆಪ್ರಜ್ಞಾವಸ್ಥೆಯಲ್ಲಿದ್ದ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು.

a-man-urinated-on-the-another-person-in-up
ಗಾಯಗೊಂಡು ಅರೆಪ್ರಜ್ಞಾವಸ್ಥೆಯಲ್ಲಿದ್ದ ವ್ಯಕ್ತಿ ಮೇಲೆ ಮೂತ್ರ ವಿಸರ್ಜನೆ : ಓರ್ವನ ಬಂಧನ
author img

By

Published : Jul 25, 2023, 11:30 AM IST

ಆಗ್ರಾ (ಉತ್ತರ ಪ್ರದೇಶ ) : ವ್ಯಕ್ತಿಯೋರ್ವ ಬುಡಕಟ್ಟು ಜನಾಂಗದ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿದ್ದ ಘಟನೆ ಇತ್ತೀಚೆಗೆ ಮಧ್ಯಪ್ರದೇಶದಲ್ಲಿ ನಡೆದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಇಂತಹುದೇ ಅಮಾನವೀಯ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ವರದಿಯಾಗಿದೆ. ವ್ಯಕ್ತಿಯೋರ್ವ ಗಾಯಗೊಂಡು ಅರೆಪ್ರಜ್ಞಾವಸ್ಥೆಯಲ್ಲಿದ್ದ ವ್ಯಕ್ತಿ ಮೇಲೆ ಮೂತ್ರ ವಿಸರ್ಜಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಈ ಸಂಬಂಧ ಓರ್ವ ಆರೋಪಿಯನ್ನು ಉತ್ತರಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ವೈರಲ್ ಆಗಿರುವ 30 ಸೆಕೆಂಡ್​ಗಳ ವಿಡಿಯೋದಲ್ಲಿ, ಗಾಯಾಳು ವ್ಯಕ್ತಿ ಅರೆಪ್ರಜ್ಞಾವಸ್ಥೆಯಲ್ಲಿ ರಸ್ತೆಯಲ್ಲಿ ಬಿದ್ದಿದ್ದಾನೆ. ಈ ಸಂದರ್ಭದಲ್ಲಿ ಓರ್ವ ವ್ಯಕ್ತಿ ಆತನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಗಾಯಾಳು ಬಿದ್ದು ಒದ್ದಾಡುತ್ತಿರುವುದನ್ನು ದೃಶ್ಯದಲ್ಲಿ ಕಾಣಬಹುದು. ಮೂತ್ರ ವಿಸರ್ಜನೆಯ ಬಳಿಕ ವ್ಯಕ್ತಿಯು ಕಾಲಿನಿಂದ ತಲೆ ಮತ್ತು ದೇಹಕ್ಕೆ ಒದೆಯುವುದು ಕೂಡಾ ದಾಖಲಾಗಿದೆ. ಮತ್ತೋರ್ವ ವ್ಯಕ್ತಿ ದುಷ್ಕೃತ್ಯವನ್ನು ಚಿತ್ರೀಕರಿಸಿದ್ದಾನೆ. ಕಳೆದ 3-4 ತಿಂಗಳ ಹಿಂದೆ ಘಟನೆ ನಡೆದಿದೆ ಎಂದು ಹೇಳಲಾಗಿದೆ. ವಿಡಿಯೋ ವೈರಲ್​ ಆಗುತ್ತಲೇ ಎಚ್ಚೆತ್ತ ಉತ್ತರ ಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಆರಂಭಿಸಿದ್ದಾರೆ.

ಡಿಸಿಪಿ ಸೂರಜ್​ ಕುಮಾರ್​ ರೈ ಪ್ರತಿಕ್ರಿಯಿಸಿ, "ಟ್ವಿಟರ್​ನಲ್ಲಿ ವ್ಯಕ್ತಿಯೋರ್ವ ಗಾಯಗೊಂಡು ರಸ್ತೆಯಲ್ಲಿದ್ದ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ವಿಡಿಯೋ ಗಮನಿಸಿದ್ದೇವೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದೆವು. ದುಷ್ಕೃತ್ಯ ಕಳೆದ ಮೂರು-ನಾಲ್ಕು ತಿಂಗಳ ಹಿಂದೆ ನಡೆದಿದೆ. ಇದೀಗ ವಿಡಿಯೋ ಸಿಕ್ಕಿದೆ. ಆದಿತ್ಯ ಎಂಬಾತನನ್ನು ಬಂಧಿಸಿ ಐಪಿಸಿ ಸೆಕ್ಷನ್​ 307 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವಿಡಿಯೋದಲ್ಲಿರುವ ಇನ್ನಷ್ಟು ವ್ಯಕ್ತಿಗಳನ್ನು ಬಂಧಿಸಲು ಶೋಧ ನಡೆಸುತ್ತಿದ್ದೇವೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ" ಎಂದು ಮಾಹಿತಿ ನೀಡಿದರು.

ದಲಿತ ವ್ಯಕ್ತಿ ಸ್ಪರ್ಶಿಸಿದ್ದಕ್ಕೆ ಮೈ ಮೇಲೆ ಮಲ ಎರಚಿದ ವ್ಯಕ್ತಿ : ಮಧ್ಯಪ್ರದೇಶದ ಛತ್ತರ್​ಪುರ್​ ಜಿಲ್ಲೆಯಲ್ಲಿ ದಲಿತ ವ್ಯಕ್ತಿಯೋರ್ವ ಸ್ಪರ್ಶಿಸಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿ ಜಾತಿ ನಿಂದಿಸಿ, ದೇಹದ ಮೇಲೆ ಮಲ ಎರಚಿದ ಘಟನೆ ನಡೆದಿತ್ತು. ಸಂತ್ರಸ್ತ ವ್ಯಕ್ತಿ ಪೊಲೀಸರು ದೂರು ನೀಡಿದ್ದರು.

ಸಂತ್ರಸ್ತ ದಶ್ರತ್ ಅಹಿರ್​ವಾರ್ ಎಂಬವರು​ ನೀಡಿರುವ ದೂರಿನ ಪ್ರಕಾರ, ದಶ್ರತ್ ಅವರು ಬಿಕೌರ ಗ್ರಾಮ ಪಂಚಾಯತ್​ನಲ್ಲಿ ಚರಂಡಿ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಆರೋಪಿ ರಾಮ್​ ಕ್ರಿಪಾಲ್​ ಪಟೇಲ್​ ಅವರು ಕೂಡಾ ಅಲ್ಲಿಯೇ ಇದ್ದರು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ದಶ್ರತ್​ ಅವರ ಗ್ರೀಸ್​ ಅಂಟಿಕೊಂಡಿದ್ದ ಕೈ ರಾಮ್​ ಕ್ರಿಪಾಲ್​ ಪಟೇಲ್​ಗೆ ತಾಗಿದೆ. ಇದರಿಂದ ಕೋಪಗೊಂಡ ಪಟೇಲ್​ ದಶ್ರತ್​ ಮೇಲೆ ಮಲ ಎರಚಿದ್ದ ಎಂದು ಆರೋಪಿಸಿದ್ದರು.

ಇದನ್ನೂ ಓದಿ : Man Urinating: ಬುಡಕಟ್ಟು ವ್ಯಕ್ತಿಯ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.