ಧುಬ್ರಿ(ಅಸ್ಸೋಂ): ಜಿಲ್ಲೆಯ ತಮಾಹಾತ್ ಗ್ರಾಮದಲ್ಲಿ ಕಾಡಾನೆಯೊಂದು ವ್ಯಕ್ತಿಯನ್ನು ಅಟ್ಟಾಡಿಸಿಕೊಂಡು ಹೋಗಿ ಆತನ ಮೇಲೆ ದಾಳಿ ಮಾಡಿರುವ ಘಟನೆ ನಡೆದಿದೆ. ಧುಬ್ರಿ ಜಿಲ್ಲೆಯಲ್ಲಿ ಡಿಸೆಂಬರ್ 18 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಮದವೇರಿದ ಒಂಟಿ ಸಲಗವು 30 ವರ್ಷದ ವ್ಯಕ್ತಿಯನ್ನು ಅಟ್ಟಾಡಿಸಿದೆ. ಈ ವೇಳೆ ಆತ ಓಡಿಹೋಗುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಆಗ ಅಲ್ಲಿಗೆ ಬಂದ ಗಜರಾಜ ಆ ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದೆ.
ಆನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಆನೆಯನ್ನು ಕಾಡಿನತ್ತ ಓಡಿಸಲಾಗಿದೆ ಎಂದು ಅರಣ್ಯಾಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.