ಗುಜರಾತ್: ವಡೋದರಾದ ಸಾವ್ಲಿ ಗೋಥಡಾ ಬಳಿಯ ಶಿವಂ ಪೆಟ್ರೋಕೆಮ್ ಇಂಡಸ್ಟ್ರೀಸ್ ಕಂಪನಿಯಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ.
ಬೆಂಕಿ ನಂದಿಸಲು ಅಗ್ನಿಶಾಮಕ ದಳ ಮತ್ತು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಇನ್ನು ಬೆಂಕಿ ಅವಘಡದಲ್ಲಿ 6 ಮಂದಿಗೆ ಗಾಯಗಳಾಗಿದ್ದು, ಇಬ್ಬರನ್ನು ಸಾವ್ಲಿ ಜನಮೋತ್ರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ನಾಲ್ವರನ್ನು ಎಸ್‌ಜಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಇನ್ನು ಘಟನೆಯಿಂದ ಸುತ್ತಮುತ್ತಲ ಜಮೀನುಗಳಲ್ಲಿ ನೆಲೆಸಿದ್ದ ಜನರು ಭಯಗೊಂಡಿದ್ದು, ಅಲ್ಲಿಂದ ಬೇರೆಡೆಗೆ ಸ್ಥಳಾಂತರಗೊಂಡಿದ್ದಾರೆ.