ಸೂರತ್(ಗುಜರಾತ್) : ತಾಯಿಯೊಬ್ಬಳು ತನ್ನ ಒಂದೂವರೆ ತಿಂಗಳ ಮಗುವಿಗೆ ಆ್ಯಸಿಡ್ ಕುಡಿಸಿ ಬಳಿಕ ತಾನೂ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸೂರತ್ನ ಪಾಂಡೆಸರಾ ಎಂಬಲ್ಲಿ ನಡೆದಿದೆ. ಆ್ಯಸಿಡ್ ಸೇವಿಸಿದ ಬಳಿಕ ಇಬ್ಬರು ಜೋರಾಗಿ ಅಳುತ್ತಿರುವುದನ್ನು ಕಂಡ ಸ್ಥಳೀಯರು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಬ್ಬರನ್ನೂ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಯತ್ನಿಸಿದ ತಾಯಿಯನ್ನು ಅಂಜು ಬೆನ್ ಎಂದು ಗುರುತಿಸಲಾಗಿದೆ.
ಘಟನೆಯ ಹಿನ್ನೆಲೆ: ಸೂರತ್ನ ಪಾಂಡೆಸರಾ ಪ್ರದೇಶದ ಗಣೇಶ ನಗರದಲ್ಲಿ ಬಲ್ಬೀರ್ ಕೇವತ್ ಮತ್ತು ಅಂಜು ಬೆನ್ ದಂಪತಿ ವಾಸವಾಗಿದ್ದರು. ಇವರಿಗೆ ಒಂದೂವರೆ ವರ್ಷದ ಪುಟ್ಟ ಮಗಳಿದ್ದಾಳೆ. ಬಲ್ಬೀರ್ ನಗರದ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದನು. ಭಾನುವಾರ ಮಧ್ಯಾಹ್ನ ಪತ್ನಿ ಅಂಜು ಮತ್ತು ಮಗಳು ಶಿಖಾ ಮನೆಯಲ್ಲಿದ್ದರು. ಈ ವೇಳೆ ಅಂಜು ತನ್ನ ಒಂದೂವರೆ ವರ್ಷ ಮಗಳಿಗೆ ಆ್ಯಸಿಡ್ ಕುಡಿಸಿ ಬಳಿಕ ತಾನೂ ಆತ್ಮಹತ್ಯೆ ಯತ್ನಿಸಿದ್ದಾರೆ. ಬಳಿಕ ಮನೆಯಲ್ಲಿ ಇಬ್ಬರೂ ಅಳುತ್ತಿರುವುದನ್ನು ಗಮನಿಸಿದ ನೆರೆಹೊರೆಯವರು ತಕ್ಷಣ ಆ್ಯಂಬುಲೆನ್ಸ್ಗೆ ಕರೆ ಮಾಡಿ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ಇಬ್ಬರಿಗೂ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪಾಂಡೆಸರಾ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಪಾಂಡೆಸರಾ ಪೊಲೀಸ್ ಅಧಿಕಾರಿ ಅನಿಲ್ ಸಿಂಗ್, ಭಾನುವಾರ ಈ ಘಟನೆ ನಡೆದಿದೆ. ಘಟನೆ ಸಂಬಂಧ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಘಟನೆ ಸಂಬಂಧ ಪತಿ ಬಲ್ಬೀರ್ ಕೇವತ್ ಹೇಳಿಕೆಯನ್ನು ಪಡೆಯಲಾಗಿದೆ. ಇನ್ನು ತನ್ನ ಪತ್ನಿಯು ಮಗಳೊಂದಿಗೆ ಆತ್ಮಹತ್ಯೆಗೆ ಯಾಕೆ ಯತ್ನಿಸಿದಳು ಎಂಬುದು ಅವರಿಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.
ಆತ್ಮಹತ್ಯೆಗೆ ಯತ್ನಿಸಿದ ತಾಯಿ ಮಗಳು ಜೋರಾಗಿ ಅಳುತ್ತಿದ್ದರು. ಇದನ್ನು ಕಂಡು ಸ್ಥಳೀಯರು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಂಜು ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಅವರ ಹೇಳಿಕೆಯನ್ನು ಪಡೆದುಕೊಳ್ಳಲಾಗಿಲ್ಲ. ಇವರ ಹೇಳಿಕೆಯ ನಂತರವಷ್ಟೇ ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ತಿಳಿದು ಬರಲಿದೆ. ಸದ್ಯ ಫೋನ್ ವಶಕ್ಕೆ ಪಡೆಯಲಾಗಿದೆ. ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ : ನಾಗ್ಪುರ ಹಿಂಗಾನಾ MIDC ಕಂಪನಿಯಲ್ಲಿ ಬೆಂಕಿ ಅವಘಡ.. ಮೂವರು ಕಾರ್ಮಿಕರು ಸಾವು