ಔರಂಗಾಬಾದ್ (ಮಹಾರಾಷ್ಟ್ರ): ಸರಿಯಾದ ಸಮಯಕ್ಕೆ ಆಕ್ಸಿಜನ್ ಸಿಗದೇ ಹಾಗೂ ಸಿಕ್ಕರೂ ಖಾಲಿ ಆಕ್ಸಿಜನ್ ಸಿಲಿಂಡರ್ಗಳಿಂದಾಗಿ ರೋಗಿಯೊಬ್ಬ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಔರಂಗಾಬಾದ್ನಲ್ಲಿ ನಡೆದಿದೆ.
ಸುನಿಲ್ ರಮೇಶ್ ಮಗರ್ ಎಂಬ ರೋಗಿ ಹೊಟ್ಟೆ ನೋವಿನ ಕಾರಣದಿಂದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದರು. ಆಸ್ಪತ್ರೆಯವರು ಅವರನ್ನು ದಾಖಲಿಸಿಕೊಂಡು ಚಿಕಿತ್ಸೆ ಮುಂದುವರಿಸಿದ್ದರು.
ಈ ವೇಳೆ ಅವರಿಗೆ ನ್ಯುಮೋನಿಯಾ ಇರುವುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಅಲ್ಲೇ ಇರುವ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಖಾಸಗಿ ಆಸ್ಪತ್ರೆಯಿಂದ ಸರ್ಕಾರಿ ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮಧ್ಯೆ ಅವರ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಒಂದರ ನಂತರ ಒಂದರಂತೆ ಮೂರು ಆಕ್ಸಿಜನ್ ಸಿಲಿಂಡರ್ಗಳನ್ನ ಹಾಕಲಾಗಿದೆ. ಆದರೆ ಅವು ಖಾಲಿಯಾಗಿದ್ದರಿಂದ ರೋಗಿಗೆ ಆಮ್ಲಜನಕ ಸಿಕ್ಕಿಲ್ಲ.
ನರ್ಸ್ ಪಂಪ್ ಆರಂಭಿಸಿದಾಗ ಸಿಲಿಂಡರ್ನಲ್ಲಿ ಆಕ್ಸಿಜನ್ ಇಲ್ಲದೇ ಇರುವುದು ಗೊತ್ತಾಗಿದೆ. ಈ ನಡುವೆ, ರೋಗಿ ಆಮ್ಲಜನಕ ಸಿಗದೇ ಕೊನೆಯುಸಿರೆಳೆದಿದ್ದಾನೆ. ಈ ದೃಶ್ಯಗಳು ಈಗ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ.