ಖಮ್ಮಂ (ತೆಲಗಾಂಣ): ಸಾಮಾಜಿಕ ಕಾರ್ಯಕರ್ತನೊಬ್ಬ ಕೋವಿಡ್ನಿಂದ ಮೃತಪಟ್ಟ ವ್ಯಕ್ತಿಯ ತುಟಿಗೆ ಮುತ್ತಿಕ್ಕಿರುವ ಘಟನೆ ನಡೆದಿದೆ.
ಮೃತದೇಹಗಳಿಂದ ವೈರಸ್ ಹರಡುವುದಿಲ್ಲ ಎಂಬ ಅರಿವು ಮೂಡಿಸಲು ಸಾಮಾಜಿಕ ಕಾರ್ಯಕರ್ತ ಹೀಗೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಾಮಾಜಿಕ ಕಾರ್ಯಕರ್ತ ಕೋವಿಡ್ ಎರಡನೇ ಅಲೆಯಲ್ಲಿ ಮೃತಪಟ್ಟ ಅನೇಕ ಜನರ ಅಂತ್ಯಸಂಸ್ಕಾರ ಮಾಡಿದ್ದಾರೆ. ಈಗ ಇವರ ನಡೆ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದು, ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ.