ನವದೆಹಲಿ: ಅಗಸ್ಟಾ ವೆಸ್ಟ್‌ಲ್ಯಾಂಡ್ ಹೆಲಿಕಾಪ್ಟರ್ ಹಗರಣ ಪ್ರಕರಣದಲ್ಲಿ ಮಧ್ಯವರ್ತಿ ಎಂದು ಆರೋಪಿಸಲಾದ ಕ್ರಿಶ್ಚಿಯನ್ ಮೈಕೆಲ್ ಅವರ ಜಾಮೀನು ಅರ್ಜಿಗಳನ್ನು ದೆಹಲಿಯ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಎರಡೂ ಪ್ರಕರಣಗಳಲ್ಲಿ ನ್ಯಾಯಾಲಯ ಜಾಮೀನು ತಿರಸ್ಕರಿಸಿದೆ.
3,600 ಕೋಟಿ ರೂ.ಗಳ ಅಗಸ್ಟಾ ವೆಸ್ಟ್‌ಲ್ಯಾಂಡ್ ಹೆಲಿಕಾಪ್ಟರ್ ಭ್ರಷ್ಟಾಚಾರ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ ಸಿಬಿಐ, ಸೆಪ್ಟೆಂಬರ್ 19, 2020 ರಂದು ಆರೋಪಿಗಳಾಗಿದ್ದ ರಾಜೀವ್ ಸಕ್ಸೇನಾ, ಮೈಕೆಲ್ ಸೇರಿದಂತೆ 15 ಆರೋಪಿಗಳ ವಿರುದ್ಧ ಪೂರಕ ಚಾರ್ಜ್‌ಶೀಟ್ ಸಲ್ಲಿಸಿದೆ.
ಈ ಹಿಂದೆ ಭಾರತೀಯ ವಾಯುಪಡೆಯ (ಐಎಎಫ್) ಮುಖ್ಯಸ್ಥ ಎಸ್.ಪಿ. ತ್ಯಾಗಿ ಮತ್ತು ಇತರ 11 ಆರೋಪಿಗಳ ವಿರುದ್ಧ ನಿರ್ದಿಷ್ಟ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸಿತ್ತು.
ಇದನ್ನೂ ಓದಿ: ಸೀರೆ ಉಟ್ಟು ಜಿಮ್ನಲ್ಲಿ ಬೆವರು ಹರಿಸಿದ ಮಹಿಳಾ ಡಾಕ್ಟರ್... ವಿಡಿಯೋ ಫುಲ್ ವೈರಲ್!