ಅಮಹದಾಬಾದ್ (ಗುಜರಾತ್): ಗುಜರಾತ್ನ ಮೋರ್ಬಿ ತೂಗು ಸೇತುವೆ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟಕ್ಕೆ ವಿಶೇಷ ಸರ್ಕಾರಿ ವಕೀಲರನ್ನು ನೇಮಿಸಲಾಗಿದೆ.
ಅಕ್ಟೋಬರ್ 30ರಂದು ಮೋರ್ಬಿ ತೂಗು ಸೇತುವೆ ಕುಸಿದು ಬಿದ್ದು 135 ಮಂದಿ ಸಾವನ್ನಪ್ಪಿದ್ದರು. ಈ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಹೈಕೋರ್ಟ್ ಸುಮೊಟೊ ಮತ್ತು ಪಿಐಎಲ್ ವಿಚಾರಣೆ ನಡೆಸುತ್ತಿದೆ. ಇತ್ತ, ಮೊರ್ಬಿ ಸಿಟಿ ಬಿ.ಡಿವಿಜನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಆಧಾರದ ಮೇಲೆ ಮೊರ್ಬಿಯ ಜಿಲ್ಲಾ ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿದ್ದು, ರಾಜ್ಕೋಟ್ ಜಿಲ್ಲಾ ಸರ್ಕಾರಿ ವಕೀಲ ಎಸ್ಕೆ ವೋರಾ ಅವರನ್ನು ರಾಜ್ಯ ಕಾನೂನು ಇಲಾಖೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಿಸಿದೆ.
ಈ ದುರಂತದಲ್ಲಿ ಮಕ್ಕಳು, ಗರ್ಭಿಣಿಯರು, ವೃದ್ಧರು ಮೃತಪಟ್ಟಿದ್ದರು. ಹಾಗಾಗಿಯೇ ಸುಪ್ರೀಂಕೋರ್ಟ್ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದೆ. ಈ ಘಟನೆಯಲ್ಲಿ ಇದುವರೆಗೆ ಒಂಬತ್ತು ಆರೋಪಿಗಳನ್ನು ಬಂಧಿಸಲಾಗಿದೆ.
ಇದನ್ನೂ ಓದಿ: ಮೋರ್ಬಿ ದುರಂತ: ಗುಜರಾತ್ನ ಎಲ್ಲ ಸೇತುವೆಗಳ ಸಮೀಕ್ಷೆಗೆ ಹೈಕೋರ್ಟ್ ಆದೇಶ