ಆಂಧ್ರಪ್ರದೇಶ : ಶಿಕ್ಷಕಿಯೊಬ್ಬರು ತಮ್ಮ ಮನೆ ನಿರ್ಮಾಣ ಕೆಲಸಕ್ಕೆ ಶಾಲಾ ವಿದ್ಯಾರ್ಥಿಗಳನ್ನು ಬಳಿಸಿಕೊಂಡಿದ್ದಾರೆ ಎನ್ನಲಾಗುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ.
ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಮನ್ನಿಲ ಗ್ರಾಮದಲ್ಲಿನ ಪ್ರೌಢಶಾಲೆಯ ಶಿಕ್ಷಕಿ ಶಿವಮ್ಮ ಎಂಬುವರು ಅನಂತಪುರದ ಆದರ್ಶನಗರದಲ್ಲಿ ಮನೆ ಕಟ್ಟುತ್ತಿದ್ದು, ಇದಕ್ಕೆ ವಿದ್ಯಾರ್ಥಿಗಳನ್ನು ಬಳಸಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಭಾನುವಾರ ಶಾಲೆಗೆ ರಜೆ ಇದ್ದ ಕಾರಣ ಶಿಕ್ಷಕಿಯೂ ಕೆಲ ವಿದ್ಯಾರ್ಥಿಗಳನ್ನು ಕರೆಸಿಕೊಂಡು ಗ್ರಾಮ ಪಂಚಾಯತ್‌ಗೆ ಸೇರಿದ ರಿಕ್ಷಾಗಳನ್ನು ಬಳಸಿ ವಿದ್ಯಾರ್ಥಿಗಳಿಂದ ಮನೆ ನಿರ್ಮಾಣಕ್ಕೆ ಬೇಕಾದ ಇಟ್ಟಿಗೆಗಳನ್ನು ಹಾಕಿಸಿಕೊಂಡಿದ್ದಾರೆ.
ಈ ಕುರಿತಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ. ಘಟನೆ ಸಂಬಂಧ ಕೆಲ ಶಿಕ್ಷಕರು, ಶಿಕ್ಷಕಿಯ ವಿರುದ್ಧ ಜಿಲ್ಲಾ ಶಿಕ್ಷಣಾಧಿಕಾರಿಗೆ ದೂರು ನೀಡಿದ್ದಾರೆ. ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಸಾಕಿದ ಶ್ವಾನಕ್ಕೆ ಸೀಮಂತ ಮಾಡಿದ ಸಬ್ ಇನ್ಸ್‌ಪೆಕ್ಟರ್ - ವಿಡಿಯೋ ವೈರಲ್