ETV Bharat / bharat

ಅಮೃತಸರದ ಔಷಧ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಮಹಿಳೆ ಸೇರಿದಂತೆ ನಾಲ್ವರ ಸಾವು, ಹಲವರು ನಾಪತ್ತೆ - ಭೀಕರ ಅಗ್ನಿ ಅವಘಡ

ಅಮೃತಸರದ ಮಜಿತಾ ರಸ್ತೆಯಲ್ಲಿರುವ ಔಷಧ ಕಾರ್ಖಾನೆಯೊಂದರಲ್ಲಿ ನಿನ್ನೆ ಸಂಜೆ ಬೆಂಕಿ ಕಾಣಿಸಿಕೊಂಡಿದೆ. ಈ ಅಗ್ನಿ ಅವಘಡದಲ್ಲಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

fire broke out
ಅಗ್ನಿ ಅವಘಡ
author img

By ETV Bharat Karnataka Team

Published : Oct 6, 2023, 9:55 AM IST

ಅಮೃತಸರ (ಪಂಜಾಬ್​) : ಮಜಿತಾ ರಸ್ತೆಯಲ್ಲಿರುವ ಔಷಧ ಕಾರ್ಖಾನೆಯಲ್ಲಿ ನಿನ್ನೆ ಸಂಜೆ ಹಠಾತ್ ಬೆಂಕಿ ಕಾಣಿಸಿಕೊಂಡಿದ್ದು ಪರಿಣಾಮ ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಸುಮಾರು ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿರುವ ನೌಕರರ ಕುಟುಂಬಸ್ಥರು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಡಿಎಸ್​ಪಿ, ನಾಗ್ ಕಲಾನ್ ಗ್ರಾಮದ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿರುವ ಸುಮಾರು 6ಕ್ಕೂ ಅಧಿಕ ಮಂದಿ ಇನ್ನೂ ನಾಪತ್ತೆಯಾಗಿದ್ದು, ಕುಟುಂಬಸ್ಥರು ಆತಂಕಗೊಂಡಿದ್ದಾರೆ. ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದವರ ಕುಟುಂಬಸ್ಥರು ತಡರಾತ್ರಿಯಾದರೂ ಮನೆಗೆ ತಮ್ಮ ಮಕ್ಕಳು ಬಂದಿಲ್ಲ ಎಂದು ಕಾರ್ಖಾನೆ ಹತ್ತಿರ ಹುಡುಕುತ್ತಿದ್ದಾರೆ. ಭೀಕರ ಅಗ್ನಿ ಅವಘಡ ಸಂಭವಿಸಿದ ಹಿನ್ನೆಲೆ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು ಎಂದರು.

ಆಡಳಿತಕ್ಕೆ ಕುಟುಂಬಗಳು ಮನವಿ: ತಮ್ಮ ಕುಟುಂಬದ ಸದಸ್ಯರು ಈ ಕಾರ್ಖಾನೆಯಲ್ಲಿ ಬಹಳ ದಿನಗಳಿಂದ ಕೆಲಸ ಮಾಡುತ್ತಿದ್ದು, ದಿನವೂ ಸಮಯಕ್ಕೆ ಸರಿಯಾಗಿ ಮನೆಗೆ ತಲುಪುತ್ತಿದ್ದರು. ಕಾರ್ಖಾನೆಯಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂಬ ಮಾಹಿತಿ ಪಡೆದು ನಾವು ಇಲ್ಲಿಗೆ ಬಂದು ನೋಡಿದಾಗ ಅವರು ಕಾಣಿಸಲಿಲ್ಲ. ಕಾರ್ಖಾನೆಯೊಳಗೆ ಮೊಬೈಲ್ ಫೋನ್ ತೆಗೆದುಕೊಂಡು ಹೋಗುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಇಲ್ಲಿ ಕೆಲಸ ಮಾಡುತ್ತಿರುವ ತಮ್ಮ ಮಕ್ಕಳನ್ನು ಆದಷ್ಟು ಬೇಗ ಪತ್ತೆ ಮಾಡಿಕೊಡಬೇಕು ಎಂದು ನಾಪತ್ತೆಯಾದ ಯುವಕರ ಕುಟುಂಬಸ್ಥರು ಆಡಳಿತ ಮಂಡಳಿಗೆ ಮನವಿ ಮಾಡಿದ್ದಾರೆ.

ಬೆಂಕಿ ನಿಯಂತ್ರಣಕ್ಕೆ: ಮತ್ತೊಂದೆಡೆ, ನಿನ್ನೆ ತಡರಾತ್ರಿಯಿಂದ ನಿರಂತರವಾಗಿ ಬೆಂಕಿ ನಂದಿಸಲು ಪ್ರಯತ್ನ ನಡೆಸಲಾಗಿದ್ದು, ಇಂದು ಬೆಳಗಿನ ಜಾವ 3:30ರ ಸುಮಾರಿಗೆ ಬೆಂಕಿಯನ್ನು ಸಂಪೂರ್ಣವಾಗಿ ಶಮನ ಮಾಡಲಾಗಿದೆ. ಸುಮಾರು 13 ಅಗ್ನಿ ಶಾಮಕ ವಾಹನಗಳನ್ನು ಬಳಸಿ ಬೆಂಕಿಯನ್ನು ಹತೋಟಿಗೆ ತರಲಾಗಿದ್ದು, ಈಗ ಎಲ್ಲಿಯೂ ಹೊಗೆ ಕಾಣಿಸುತ್ತಿಲ್ಲ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನೊಂದೆಡೆ, ಮಹಾರಾಷ್ಟ್ರದ ಗೊರಗಾಂವ್​ನಲ್ಲಿರುವ ಕಟ್ಟಡದಲ್ಲಿ ಸಹ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ. 31 ಮಂದಿ ಗಾಯಗೊಂಡಿದ್ದು, 14 ಜನರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈನ ಟ್ರಾಮಾ ಕೇರ್ ಮತ್ತು ಕೂಪರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿಯಿಂದ 40 ಜನರನ್ನು ರಕ್ಷಿಸಲಾಗಿದೆ. ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಅನೇಕರು ಕಟ್ಟಡದಲ್ಲಿ ಸಿಲುಕಿದ್ದಾರೆ ಎಂಬ ಮಾಹಿತಿಯಿದ್ದು, ಅವರನ್ನು ರಕ್ಷಿಸಲು ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಅಂತಾ ಮುಂಬೈ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ : ಬಹುಮಹಡಿ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ : ಮೃತರ ಸಂಖ್ಯೆ 7ಕ್ಕೆ ಏರಿಕೆ, 31 ಮಂದಿ ಗಾಯ, ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿ...

ETV Bharat Logo

Copyright © 2024 Ushodaya Enterprises Pvt. Ltd., All Rights Reserved.