ETV Bharat / bharat

Building collapse: 3 ಅಂತಸ್ತಿನ ಕಟ್ಟಡ ಕುಸಿದು ನಾಲ್ವರು ಸಾವು.. 12 ಮಂದಿ ರಕ್ಷಣೆ, ಮುಂದುವರೆದ ರಕ್ಷಣಾ ಕಾರ್ಯಾಚರಣೆ - 3 ಅಂತಸ್ತಿನ ಕಟ್ಟಡ ಕುಸಿತ

ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ 3 ಅಂತಸ್ತಿನ ಕಟ್ಟಡ ಕುಸಿದಿದ್ದು, ಪರಿಣಾಮ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. 12 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

A three storey building collapsed in barabanki
3 ಅಂತಸ್ತಿನ ಕಟ್ಟಡ ಕುಸಿದು ನಾಲ್ವರು ಸಾವು
author img

By ETV Bharat Karnataka Team

Published : Sep 4, 2023, 11:14 AM IST

ಬಾರಾಬಂಕಿ (ಉತ್ತರ ಪ್ರದೇಶ): ಇಲ್ಲಿನ ಫತೇಪುರದ ಸತ್ತಿ ಬಜಾರ್‌ನಲ್ಲಿ ಇಂದು ಮುಂಜಾನೆ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದು ದುರಂತದಲ್ಲಿ 4 ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದ್ದು, ಅನೇಕರು ಅವಶೇಷಗಳ ಅಡಿಯಲ್ಲಿ ಹೂತು ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಬಾರಾಬಂಕಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಸಿಂಗ್, "ಫತೇಪುರ ಪಟ್ಟಣದ ಸತ್ತಿ ಮಾರುಕಟ್ಟೆಯಲ್ಲಿ 3 ಅಂತಸ್ತಿನ ಕಟ್ಟಡವೊಂದು ಇಂದು ಮುಂಜಾನೆ 3 ಗಂಟೆ ವೇಳೆಗೆ ಏಕಾಏಕಿ ಕುಸಿದು ಬಿದ್ದಿದೆ. ವಿಷಯ ತಿಳಿದ ಕೂಡಲೇ ಸ್ಥಳೀಯರು ಪರಿಹಾರ ಹಾಗೂ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಪೊಲೀಸರಿಗೆ ಮಾಹಿತಿ ನೀಡಿದರು. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ರಕ್ಷಣಾ ಕಾರ್ಯ ಆರಂಭಿಸಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳು ಸಹ ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ಪಾಲ್ಗೊಂಡಿವೆ. ಅವಶೇಷಗಳಡಿ ಹಲವರು ಹೂತು ಹೋಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಸದ್ಯಕ್ಕೆ 12 ಜನರನ್ನು ರಕ್ಷಿಸಲಾಗಿದೆ" ಎಂದು ತಿಳಿಸಿದರು.

ಇದನ್ನೂ ಓದಿ : Mumbai Rains: ಎರಡಂತಸ್ತಿನ ಕಟ್ಟಡದ ಬಾಲ್ಕನಿ ಕುಸಿತ: ಇಬ್ಬರು ವೃದ್ಧರ ದುರ್ಮರಣ

ಸ್ಥಳದಲ್ಲಿ ಭಾರಿ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಉನ್ನತ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಕಳೆದ ಶನಿವಾರ ಮಧ್ಯರಾತ್ರಿ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ಎಂಬಲ್ಲಿ 40 ವರ್ಷ ಹಳೆಯದಾದ ಎರಡು ಅಂತಸ್ತಿನ ಕಟ್ಟಡದ ಹಿಂಭಾಗದ ಸ್ಲ್ಯಾಬ್ ಇದ್ದಕ್ಕಿದ್ದಂತೆ ಕುಸಿದು ಬಿದ್ದಿತ್ತು. ಈ ವೇಳೆ ಮೊದಲ ಮಹಡಿಯಲ್ಲಿ ಅವಶೇಷಗಳಡಿ ಸಿಲುಕಿ ಶಿಶು ಸೇರಿದಂತೆ ಇಬ್ಬರು ಕುಟುಂಬ ಸದಸ್ಯರು ಜೀವಂತ ಸಮಾಧಿಯಾಗಿದ್ದರು. ಅಲ್ಲದೇ, ಮೂರ್ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ರಿಕ್ಷಾದಲ್ಲಿ ಆಸ್ಪತ್ರೆಗೆ ಸಾಗಿಸಲಾಗಿತ್ತು.

ಇದನ್ನೂ ಓದಿ : Building Collapses : ಮಥುರಾದಲ್ಲಿ ಹಳೆಯ ಕಟ್ಟಡ ಕುಸಿದು ಐವರು ಸಾವು ; ಸಿಸಿಟಿವಿ ದೃಶ್ಯ!

ಕಳೆದ ಆಗಸ್ಟ್​ 15 ರಂದು ಹಳೆಯ ಕಟ್ಟಡವೊಂದು ಕುಸಿದು ಬಿದ್ದು ಐವರು ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿತ್ತು. ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ಅಧಿಕಾರಿಗಳ ತಂಡ ದೌಡಾಯಿಸಿ ರಕ್ಷಣಾ ಕಾರ್ಯ ನಡೆಸಿದ್ದರು. ಮೃತರನ್ನು ಕಾನ್ಪುರ ನಿವಾಸಿಗಳಾದ ಗೀತಾ ಕಶ್ಯಪ್, ಅರವಿಂದ್ ಕುಮಾರ್, ರಶ್ಮಿ ಗುಪ್ತಾ ಹಾಗೂ ಸ್ಥಳೀಯ ನಿವಾಸಿ ಅಂಜು ಮುಗಿ ಎಂದು ಗುರುತಿಸಲಾಗಿತ್ತು. ಹಾಗೆಯೇ, ಮಥುರಾ ವೃಂದಾವನ ಸಮೀಪದ ಬಂಕೆ ಬಿಹಾರಿ ದೇವಸ್ಥಾನದಿಂದ ಕೇವಲ 200 ಮೀಟರ್ ದೂರದಲ್ಲಿ ಹಳೆಯ ಕಟ್ಟಡ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದೆ ಎಂದು ಪೊಲೀಸರು ಸಹ ತಿಳಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.