ಚಮೋಲಿ (ಉತ್ತರಾಖಂಡ): ಫೆಬ್ರವರಿ 7ರಂದು ಉತ್ತರಾಖಂಡದ ಚಮೋಲಿಯಲ್ಲಿ ಹಿಮಸ್ಫೋಟಿಸಿ ಉಂಟಾದ ಪ್ರವಾಹದಲ್ಲಿ ಸಾವನ್ನಪ್ಪಿದ್ದರ ಸಂಖ್ಯೆ 54ಕ್ಕೆ ಏರಿಕೆಯಾಗಿದೆ.
ಜೋಶಿಮಠದ ತಪೋವನ ಸುರಂಗ, ರೇನಿ ಗ್ರಾಮ ಸೇರಿ ಚಮೋಲಿಯಲ್ಲಿ ಈವರೆಗೆ ಒಟ್ಟು 54 ಮೃತದೇಹಗಳು ಪತ್ತೆಯಾಗಿವೆ. 179 ಮಂದಿ ನಾಪತ್ತೆಯಾಗಿರುವುದಾಗಿ ಜೋಶಿಮಠ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ ಎಂದು ಚಮೋಲಿ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ವಿರುಧುನಗರ್ ಪಟಾಕಿ ದುರಂತ: ಸಾವಿನ ಸಂಖ್ಯೆ 20ಕ್ಕೆ ಏರಿಕೆ
ಹಗಲು - ರಾತ್ರಿಯೆನ್ನದೇ ದಿನದ 24 ಗಂಟೆಗಳ ಕಾಲವೂ ಐಟಿಬಿಪಿ, ಎನ್ಡಿಆರ್ಎಫ್, ಎಸ್ಡಿಆರ್ಎಫ್ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಡೆಪ್ಯೂಟಿ ಕಮಾಂಡೆಂಟ್ ಆದಿತ್ಯ ಪ್ರತಾಪ್ ಸಿಂಗ್ ಹೇಳಿದ್ದಾರೆ.