ನಾಗರ್ ಕರ್ನೂಲ್(ತೆಲಂಗಾಣ): ಹಣ್ಣಿನ ಬೀಜ, ನಾಣ್ಯಗಳು ಮಗುವಿನ ಗಂಟಲಿನಲ್ಲಿ ಸಿಲುಕಿಕೊಂಡು ಸಾವನ್ನಪ್ಪಿರುವ ಸುದ್ದಿ ನಾವು - ನವೆಲ್ಲರೂ ಕೇಳಿರುತ್ತೇವೆ. ಆದರೆ, ಮಹಿಳೆಯೊಬ್ಬಳು ಮೊಟ್ಟೆ ತಿನ್ನುತ್ತಿದ್ದ ವೇಳೆ, ಅದು ಗಂಟಲಿನಲ್ಲಿ ಸಿಲುಕಿಕೊಂಡು ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ತೆಲಂಗಾಣದ ನಾಗರ್ ಕರ್ನೂಲ್ ಜಿಲ್ಲೆಯ ನೇರಳಪಲ್ಲಿಯಲ್ಲಿ ಈ ಘಟನೆ ನಡೆದಿದ್ದು, 50 ವರ್ಷದ ನೀಲಮ್ಮ ಮನೆಯಲ್ಲಿ ಊಟ ಮಾಡಿದ ನಂತರ ಬೇಯಿಸಿದ ಮೊಟ್ಟೆ ತಿನ್ನಲು ಬಾಯಿಯೊಳಗೆ ಹಾಕಿಕೊಂಡಿದ್ದಾಳೆ. ಈ ವೇಳೆ, ಅದು ನೇರವಾಗಿ ಗಂಟಲಿನ ಭಾಗದಲ್ಲಿ ಸಿಲುಕಿಕೊಂಡಿದೆ. ಇದರಿಂದ ಕ್ಷಣಾರ್ಧದಲ್ಲೇ ಉಸಿರುಗಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಇದನ್ನೂ ಓದಿರಿ: ಇಂದು ವಿಶ್ವ ದೃಷ್ಟಿ ದಿನ: ನಿಮ್ಮ ಕಣ್ಣುಗಳ ಮೇಲಿರಲಿ ಪ್ರೀತಿ, ಕಾಳಜಿ..
ಈ ಘಟನೆ ಮಂಗಳವಾರ ರಾತ್ರಿ ನಡೆದಿದ್ದು, ಕುಟುಂಬಸ್ಥರು ಇದರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆಂದು ತಿಳಿದು ಬಂದಿದೆ.