ETV Bharat / bharat

ಇಬ್ಬರು ಹೆಣ್ಣು ಮಕ್ಕಳೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ

author img

By

Published : Oct 15, 2022, 4:54 PM IST

ಮಹಾರಾಷ್ಟ್ರದ ಭಂಡಾರ ಜಿಲ್ಲೆಯ ವೈಗಂಗಾ ನದಿಗೆ ತಾಯಿಯೊಬ್ಬರು ತಮ್ಮ ಮಕ್ಕಳೊಂದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

a-woman-suicide-by-jumping-into-river-along-with-her-two-small-daughters
ಮಧ್ಯರಾತ್ರಿ ಇಬ್ಬರು ಚಿಕ್ಕ ಹೆಣ್ಣು ಮಕ್ಕಳೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ

ಭಂಡಾರ (ಮಹಾರಾಷ್ಟ್ರ): ಮಹಿಳೆಯೊಬ್ಬರು ತಮ್ಮ ಇಬ್ಬರು ಚಿಕ್ಕ ಹೆಣ್ಣು ಮಕ್ಕಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಮಹಾರಾಷ್ಟ್ರದ ಭಂಡಾರ ಜಿಲ್ಲೆಯಲ್ಲಿ ನಡೆದಿದೆ. ಶುಕ್ರವಾರ ಮತ್ತು ಶನಿವಾರದ ಮಧ್ಯರಾತ್ರಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಮೃತರನ್ನು ದೀಪಾಲಿ ಶೀತಲ್ ಖಂಗರ್ (28) ಮತ್ತು ಮೂರು ಹಾಗೂ ಎರಡು ವರ್ಷದ ಹೆಣ್ಣುಮಕ್ಕಳು ಎಂದು ಗುರುತಿಸಲಾಗಿದೆ. ಇವರು ಭಂಡಾರ ತಾಲೂಕಿನ ವೈಗಂಗಾ ನದಿಯ ತೀರದ ತಿದ್ದಿ ಗ್ರಾಮದ ನಿವಾಸಿಗಳು ಎಂದು ಗೊತ್ತಾಗಿದೆ.

ಮಧ್ಯರಾತ್ರಿ 12 ಗಂಟೆ ಸುಮಾರಿಗೆ ದೀಪಾಲಿ ತಮ್ಮ ಇಬ್ಬರು ಮಕ್ಕಳೊಂದಿಗೆ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ನದಿಯಲ್ಲಿ ಶವಗಳು ತೇಲಿಬಂದಿದ್ದು, ಆಗ ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಕರ್ಧಾ ಠಾಣೆ ಪೊಲೀಸ್ ಇನ್ಸ್​ಪೆಕ್ಟರ್ ಥೋರಟ್ ಮತ್ತು ತಹಶಿಲ್ದಾರ್ ಅರವಿಂದ ಹಿಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದೀಪಾಲಿ ಅವರ ಆತ್ಮಹತ್ಯೆ ನಿರ್ಧಾರದ ಕುರಿತ ಇನ್ನೂ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಯಾದಗಿರಿ: ನೇಣು ಬಿಗಿದ ಸ್ಥಿತಿಯಲ್ಲಿ ಕಾಲೇಜು ವಿದ್ಯಾರ್ಥಿ ಮೃತದೇಹ ಪತ್ತೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.