ETV Bharat / bharat

ಎರಡು ವರ್ಷದ ಮಗನ ಎದುರೇ ಮಹಿಳೆ ಮೇಲೆ ರೈಲು ನಿಲ್ದಾಣದಲ್ಲಿ ಗ್ಯಾಂಗ್​ ರೇಪ್​!

ಪಲ್ನಾಡು ಜಿಲ್ಲೆಯ ಗುರಜಾಲ ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ 2 ವರ್ಷದ ಮಗನ ಎದುರೇ ಮಹಿಳೆಯೊಬ್ಬರ ಮೇಲೆ ಕಾಮುಕರು ಅಟ್ಟಹಾಸ ಮೆರೆದಿದ್ದಾರೆ.

A woman was raped in front of her two-year-old sonA woman was raped in front of her two-year-old son
ಎರಡು ವರ್ಷದ ಮಗನ ಎದುರೇ ಮಹಿಳೆಯ ಮೇಲೆ ಅತ್ಯಾಚಾರ
author img

By

Published : Apr 17, 2022, 1:40 PM IST

ಪಲ್ನಾಡು (ಆಂಧ್ರಪ್ರದೇಶ) : ಸ್ಥಳೀಯ ರೈಲ್ವೆ ನಿಲ್ದಾಣದಲ್ಲಿ 2 ವರ್ಷದ ಮಗನ ಎದುರೇ ಮಹಿಳೆಯೊಬ್ಬರು ಅತ್ಯಾಚಾರಕ್ಕೆ ಒಳಗಾಗಿದ್ದಾರೆ. ಪಲ್ನಾಡು ಜಿಲ್ಲೆಯ ಗುರಜಾಲ ಪಟ್ಟಣದಲ್ಲಿ ಅಪರಿಚಿತ ಮಹಿಳೆಯ ಮೇಲೆ ಇಬ್ಬರು ಕಾಮುಕರು ಅತ್ಯಾಚಾರವೆಸಗಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ರಕ್ತಸ್ರಾವವಾಗಿ ಬಿದ್ದಿದ್ದ ಮಹಿಳೆಯನ್ನು ಕಂಡ ಸ್ಥಳೀಯರು ಕೂಡಲೇ ಆಕೆಯನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ಮಹಿಳೆಯ ಪಕ್ಕದಲ್ಲಿ ಎರಡು ವರ್ಷದ ಬಾಲಕ ಇದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ಮಹಿಳೆ ಆಘಾತಕ್ಕೊಳಗಾಗಿದ್ದಳು. ಯಾವುದೇ ವಿವರಗಳನ್ನು ನೀಡಲು ಸಾಧ್ಯವಿಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಇಬ್ಬರು ಪುರುಷರು ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆಂದಷ್ಟೇ ಆಕೆ ಹೇಳಿದ್ದಾಳೆ. ವೈದ್ಯಕೀಯ ಪರೀಕ್ಷೆಯ ನಂತರ ಸಂಪೂರ್ಣ ಮಾಹಿತಿ ಬಹಿರಂಗವಾಗಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಜಹಾಂಗೀರ್‌ಪುರಿ ಹಿಂಸಾಚಾರ ಪ್ರಕರಣ: 9 ಮಂದಿ ಆರೋಪಿಗಳ ಬಂಧನ

ಸಂತ್ರಸ್ತೆ ಈ ರಾಜ್ಯದವರಲ್ಲ, ಆಕೆಗೆ ತೆಲುಗು ಬರುವುದಿಲ್ಲ ಎಂಬ ಮಾಹಿತಿ ಇದೆ. ಕೂಲಿ ಕೆಲಸಕ್ಕೆಂದು ಇಲ್ಲಿಗೆ ಬಂದಿದ್ದಳು. ತನ್ನ 2 ವರ್ಷದ ಮಗನ ಜೊತೆ ಆಕೆ ಶನಿವಾರ ರಾತ್ರಿ ರೈಲ್ವೆ ನಿಲ್ದಾಣದಲ್ಲಿ ಮಲಗಿದ್ದಾಗ ಈ ಘಟನೆ ಜರುಗಿದೆ. ಘಟನೆಯ ಬಗ್ಗೆ ಎಡಪಕ್ಷ ನಾಯಕರು ಆಘಾತ ವ್ಯಕ್ತಪಡಿಸಿದ್ದಾರೆ. ಪಟ್ಟಣದಲ್ಲಿ ಜನಪರ ಸಂಘಟನೆಗಳ ವತಿಯಿಂದ ರ್ಯಾಲಿ ನಡೆಸಲಾಯಿತು. ಸಂತ್ರಸ್ತೆಗೆ ನ್ಯಾಯ ಒದಗಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.