ಮುಂಬೈ: ರೈಲು ಡಿಕ್ಕಿಯಾದ ಪರಿಣಾಮ ನಾಲ್ವರು ಗ್ಯಾಂಗ್ಮನ್ಗಳು ಸಾವನ್ನಪ್ಪಿರುವ ದಾರುಣ ಘಟನೆ ನಾಸಿಕ್ ಜಿಲ್ಲೆಯ ಲಾಸಲ್ ಗಾಂವ್ ರೈಲು ನಿಲ್ದಾಣದಲ್ಲಿ ನಡೆದಿದೆ. ಲೈಟ್ ರಿಪೇರಿ ಎಂಜಿನ್ ತಪ್ಪು ದಿಕ್ಕಿನಲ್ಲಿ ಬಂದ ಪರಿಣಾಮ ಈ ದುರ್ಘಟನೆ ನಡೆದಿದೆ. ಲಾಸಲ್‌ಗಾಂವ್ ರೈಲು ನಿಲ್ದಾಣದಲ್ಲಿ ಬೆಳಗ್ಗೆ 5.44ರ ಸಮಯದಲ್ಲಿ ಲೈಟ್ ಸರಿಪಡಿಸುವ ಎಂಜಿನ್ ಉಗ್ವ್ ನಿಂದ ಲಾಸ್ಲ್ ಗಾಂವ್ ಬಳಿ ತಪ್ಪಾದ ಮಾರ್ಗದಲ್ಲಿ ಬಂದಿದೆ. ಈ ವೇಳೆ 230 ಕಿಮೀ ಉದ್ದದ ಮತ್ತು ಪೋಲ್ ಸಂಖ್ಯೆ 15 ರಿಂದ 17 ರ ನಡುವೆ ಟ್ರ್ಯಾಕ್ ನಿರ್ವಹಣೆ ಕಾರ್ಯ ನಡೆಯುತ್ತಿತ್ತು. ಈ ಹಿನ್ನೆಲೆ ನಾಲ್ವರು ಹಳಿ ನಿರ್ವಹಣಾ ಕಾರ್ಮಿಕರು ಈ ಕೆಲಸ ಮಾಡುತ್ತಿದ್ದಾಗ ರೈಲು ಮಾರ್ಗದ ನಿರ್ವಹಣಾ ಗೋಪುರಕ್ಕೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ನಾಲ್ವರು ಗಾಯಗೊಂಡು ಸಾವನ್ನಪ್ಪಿದ್ದಾರೆ.
ಸಾವನ್ನಪ್ಪಿದವರನ್ನು ಸಂತೋಷ್ ಬಾಬುರಾವ್ ಕೆದರೆ (38), ದಿನೇಶ್ ಸಹದಿ ದರದೆ (35), ಕೃಷ್ಣ ಆತ್ಮರಾಮ್ ಅಹಿರೆ (40), ಸಂಶೋಷ್ ಸುಖದೇವ್ ಶಿರಸ್ಥ (38) ಎಂದು ಗುರುತಿಸಲಾಗಿದೆ
ಚೆನ್ನೈನಲ್ಲಿ ರಸ್ತೆ ಅಪಘಾತ; ನಾಲ್ವರಿಗೆ ಗಾಯ.. ತಮಿಳುನಾಡಿನ ಚೆನ್ನೈನ ಮರೀನಾ ಬೀಚ್ನಲ್ಲಿ ಶನಿವಾರ ರಾತ್ರಿ ನಡೆದ ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಘಟನೆ ತಿಳಿಯುತ್ತಿದ್ದಂತೆ ತಮಿಳುನಾಡು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಸುಬ್ರಹ್ಮಣಿಯನ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಚಿಕಿತ್ಸೆ ಬಳಿಕ ಮೂವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಓರ್ವನಿಗೆ ಚಿಕಿತ್ಸೆ ಮುಂದುವರೆದಿದೆ.
ಕಾರನ್ನು ಓವರ್ ಟೇಕ್ ಮಾಡಲು ಹೋಗಿ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಹೆಲ್ಮೆಟ್ ರಹಿತ ಪ್ರಯಾಣ; ಸವಾರ ಸಾವು.. ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ಭಾನುವಾರ ನಡೆದ ಅಪಘಾತದಲ್ಲಿ 26 ವರ್ಷದ ಯುವಕ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ಸಂಜಯ್ ಕುಮಾರ್ ಸಾವನ್ನಪ್ಪಿದ ವ್ಯಕ್ತಿ. ಮಧ್ಯರಾತ್ರಿ ಸುಮಾರು 1. 30ರ ಸುಮಾರಿಗೆ ಹೆಲ್ಮೆಟ್ ಧರಿಸದೇ, ವೇಗವಾಗಿ ಪ್ರಯಾಣಿಸುತ್ತಿದ್ದ ಈತನ ಬೈಕ್ ನಿಯಂತ್ರಣ ತಪ್ಪಿದೆ. ಪರಿಣಾಮವಾಗಿ ಬಿದ್ದ ಯುವಕನ ತಲೆ ಕಲ್ಲಿಗೆ ಹೊಡೆದಿದ್ದು, ಸಾವನ್ನಪ್ಪಿದ್ದಾನೆ. ತಕ್ಷಣಕ್ಕೆ ಯುವಕನನ್ನು ತಕ್ಷಣಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ನಿಮ್ಹಾನ್ಸ್ಗೆ ಕರೆದೊಯ್ಯಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗಿಲ್ಲ ಎಂದು ತಿಳಿದು ಬಂದಿದೆ. ಇನ್ನು ಈ ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಯುವಕ ಕುಡಿದು ಗಾಡಿ ಚಲಾಯಿಸುತ್ತಿರಬಹುದು ಎಂಬ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ.
ಗದಗದಲ್ಲಿ ಅಪಘಾತ: ಎಲ್ಪಿಜಿ ಆಟೋ ಹಾಗೂ ಮಿನಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ. ಗದಗ ಜಿಲ್ಲೆಯ ಬೆಟಗೇರಿ ಸಮೀಪದ ಗಜೇಂದ್ರಗಡ ರಸ್ತೆಯ ಬಸವೇಶ್ವರ ದೇವಸ್ಥಾನದ ಬಳಿ ಈ ದುರ್ಘಟನೆ ನಡೆದಿದೆ. ಮೃತರನ್ನು ಬೆಟಗೇರಿಯ ನರಸಾಪೂರ ಆಶ್ರಯ ಕಾಲೋನಿಯ ಸಯ್ಯದ್ ಅಲಿ (20), ಪ್ರದೀಪ್ (40) ಹಾಗೂ ಬೆಟಗೇರಿ ನಿವಾಸಿ ಮಂಜುನಾಥ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಹಾಸ್ಟೆಲ್ನಲ್ಲಿ ಆತ್ಮಹತ್ಯೆಗೆ ಶರಣಾದ ಬಾಂಬೆ ಐಐಟಿ ಕಾಲೇಜು ವಿದ್ಯಾರ್ಥಿ