ETV Bharat / bharat

ಯುವತಿ ಮೇಲೆ ಪ್ರಿಯಕರ, ಆತನ ಸಹಚರರಿಂದ ಸಾಮೂಹಿಕ ಅತ್ಯಾಚಾರ: ಇಬ್ಬರ ಬಂಧನ - ಡಾರ್ಜಿಲಿಂಗ್​ ಸಾಮೂಹಿಕ ಅತ್ಯಾಚಾರ

ಡಾರ್ಜಿಲಿಂಗ್​ನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.

ಸಾಮೂಹಿಕ ಅತ್ಯಾಚಾರ
ಸಾಮೂಹಿಕ ಅತ್ಯಾಚಾರ
author img

By ETV Bharat Karnataka Team

Published : Nov 24, 2023, 6:45 PM IST

ಡಾರ್ಜಿಲಿಂಗ್( ಪಶ್ಚಿಮಬಂಗಾಳ): ಯುವತಿಯೊಬ್ಬಳ ಮೇಲೆ ಆಕೆಯ ಪ್ರಿಯಕರನೇ ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದ್ದು ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಯುವತಿ ಪ್ರಿಯಕರ ನಿತಿನ್​ ಒನ್ರಾವ್ ಮತ್ತು ಆತನ ಸ್ನೇಹಿತ ಸುಮೇಶ್ ಸೌರಿಯಾನನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆ ವಿವರ: ನಿನ್ನೆ ದಿನ ಆರೋಪಿ ನಿತಿನ್​ ತನ್ನ ಪ್ರಿಯತಮೆ (ಸಂತ್ರಸ್ತೆ)ಯನ್ನು ಟೀ ತೋಟಕ್ಕೆ ಭೇಟಿಯಾಗಲೆಂದು ಕರೆದಿದ್ದಾನೆ. ಬಳಿಕ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ತನ್ನ ಸ್ನೇಹಿತರೊಂದಿಗೆ ಸೇರಿ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ. ಈ ಸಂಬಂಧ ನಕ್ಸಲ್ಬರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿದ್ದಾರೆ.

ಬಂಧಿತರನ್ನು ಇಂದು ಬೆಳಗ್ಗೆ ಸಿಲಿಗುರಿ ಉಪವಿಭಾಗೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಐದು ದಿನಗಳ ನ್ಯಾಯಾಂಗ ಬಂಧನಕ್ಕೆ ನ್ಯಾಯಾಧೀಶರು ಆದೇಶಿಸಿದ್ದಾರೆ. ಘಟನೆಯಲ್ಲಿ ಇನ್ನೂ ಕೆಲ ಯುವಕರು ಭಾಗಿಯಾಗಿರುವುದಾಗಿ ಕೇಳಿ ಬಂದಿದೆ.

ಪೊಲೀಸ್​ ವರಿಷ್ಠಾಧಿಕಾರಿ ಹೇಳಿದಿಷ್ಟು: ಘಟನೆ ಬಗ್ಗೆ ಎಸ್ಪಿ ಪ್ರವೀಣ್ ಪ್ರಕಾಶ್ ಪ್ರತಿಕ್ರಿಯಿಸಿದ್ದು, ಘಟನೆ ಸಂಬಂಧ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಇದರಲ್ಲಿ ಇನ್ನೂ ಕೆಲ ಯುವಕರು ಭಾಗಿಯಾಗಿರುವುದಾಗಿ ಕೇಳಿ ಬಂದಿದೆ. ಈ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಸದ್ಯ ಸಂತ್ರಸ್ತ ಯುವತಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಉತ್ತರ ಬಂಗಾಳದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಲಾಗಿದೆ.

ಆರೋಪಿತರಾದ ನಿತಿನ್ ಒನ್ರಾವ್ ಮತ್ತು ಸುಮೇಶ್ ಸೌರಿಯಾ ಇಬ್ಬರೂ ನಕ್ಸಲ್ಬರಿ ಬ್ಲಾಕ್ ನಿವಾಸಿಗಳಾಗಿದ್ದು, ಸಂತ್ರಸ್ತೆ ಕೂಡ ಅದೇ ಪ್ರದೇಶದವರಾಗಿದ್ದಾರೆ. ಆರೋಪಿಗಳಿಬ್ಬರು ಟೀ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಬಂಧಿತರಲ್ಲಿ ನಿತಿನ್ ಸಂತ್ರಸ್ತೆ ಜೊತೆ ಪ್ರೇಮ ಸಂಬಂಧ ಹೊಂದಿದ್ದ.

ಘಟನೆ ನಡೆದ ದಿನ ಮಧ್ಯಾಹ್ನ ಆರೋಪಿ ಸಂತ್ರಸ್ತೆಯನ್ನು ಭೇಟಿಯಾಗಲು ಚಹಾ ತೋಟಕ್ಕೆ ಕರೆದಿದ್ದ. ಬಳಿಕ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ಅದಾಗಲೇ ನಿತಿನ್​ ತನ್ನ ಸ್ನೇಹಿತರಿಗೂ ನಿರ್ಜನ ಪ್ರದೇಶಕ್ಕೆ ಕರೆಸಿದ್ದ. ಯುವತಿ ಅಲ್ಲಿಗೆ ತಲುಪಿದ ನಂತರ ಮದ್ಯ ಕುಡಿಸಲು ಪ್ರಯತ್ನಿಸಿದ್ದಾರೆ. ಇದಕ್ಕೆ ನಿರಾಕರಿಸಿದಾಗ ಆಕೆಗೆ ಬಲವಂತವಾಗಿ ಕುಡಿಸಲು ಮುಂದಾಗಿದ್ದಾರೆ. ಇದಕ್ಕೆ ಆಕೆ ವಿರೋಧಿಸಿದಾಗ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾಳೆ.

ಬಳಿಕ ಅಲ್ಲಿಂದ ತಪ್ಪಿಸಿಕೊಂಡು ಮನೆಗೆ ತಲುಪಿ ನಡೆದ ಘಟನೆ ಬಗ್ಗೆ ಸಂತ್ರಸ್ತೆ ತನ್ನ ಪೋಷಕರಿಗೆ ತಿಳಿಸಿದ್ದಾಳೆ. ಅದೇ ದಿನ ರಾತ್ರಿ ಆಕೆಯ ಪೋಷಕರು ನಕ್ಸಲ್ಬರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕೂಡಲೇ ಇಬ್ಬರು ಆರೋಪಿಗಳನ್ನು ಬಂಧಿಸಿ ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿಗಳನ್ನು 5 ದಿನಗಳ ವರೆಗೆ ನ್ಯಾಯಾಂಗ ಬಂಧನಕ್ಕೆ ಪಡೆಯುವಂತೆ ನ್ಯಾಯಾಧೀಶರು ಆದೇಶ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: 5ನೇ ತರಗತಿ ವಿದ್ಯಾರ್ಥಿನಿ ಅತ್ಯಾಚಾರ.. ಆರೋಪಿಯನ್ನು ಒಪ್ಪಿಸುವಂತೆ ಆಗ್ರಹಿಸಿ ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.