ಶ್ರೀ ಗಂಗಾನಗರ (ರಾಜಸ್ಥಾನ): ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡ ಕುಲ್ದೀಪ್ ಕುಮಾರ್ ಕಾಂಬೋಜ್ ತನಗೆ ಕಿರುಕುಳ ನೀಡಿದ್ದಾರೆ ಎಂದು ಶ್ರೀ ಗಂಗಾನಗರದ ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಇದಕ್ಕೆ ಕುಲ್ದೀಪ್ ಕುಮಾರ್ ಕಾಂಬೋಜ್ ಪ್ರತಿಕ್ರಿಯಿಸಿ ಇದೊಂದು ಹನಿಟ್ರ್ಯಾಪ್ ಎಂದು ಆರೋಪಿಸಿ, ಆಕೆ ದೂರನ್ನು ನಿರಾಕರಿಸಿದ್ದಾರೆ. ಸದ್ಯ ಈ ಪ್ರಕರನ ಸಂಬಂಧ ಶ್ರೀ ಗಂಗಾನಗರ ಮಹಿಳಾ ಠಾಣೆ ಪೊಲೀಸರು ಪ್ರಕರಣ ದಾಖಲಾಗಿದೆ.
ಮಹಿಳೆ ಅಬೋಹರ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಕಾಂಬೋಜ್‌ನ ಮೂವರು ಸ್ನೇಹಿತರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಕಾಂಬೋಜ್ ತನ್ನ ಮೇಲೆ ಲೈಂಗಿಕ ಕಿರುಕುಳ ನೀಡಿದ್ದರಿಂದ ಗರ್ಭಿಣಿಯಾಗಿದ್ದೆ, ಆದರೆ ಮಾತ್ರೆಗಳನ್ನು ಸೇವಿಸಿ ಗರ್ಭಪಾತಕ್ಕೆ ಮಾಡಿಸಿಕೊಂಡಿರುವುದಾಗಿ ಹೇಳಿಕೊಂಡಿದ್ದಾರೆ.
ತಾನು ಒಂದು ವಿಷಯದಲ್ಲಿ ಕಾಂಬೋಜ್‌ನ ಸಹಾಯ ಪಡೆಯಲು ಹೋಗಿದ್ದೆ. ಅಂದು ಪಕ್ಷದ ಕಚೇರಿಯಲ್ಲಿ ತುಂಬಾ ಜನಸಂದಣಿ ಇದ್ದುದರಿಂದ ಅವರು ಜೊತೆ ಮಾತನಾಡಲು ಸಾಧ್ಯವಾಗಲಿಲ್ಲ. ಬದಲಾಗಿ ತನ್ನಲ್ಲಿ ಪ್ರತ್ಯೇಕವಾಗಿ ಮಾತನಾಡುವುದಾಗಿ ತಿಳಿಸಿದ್ದರು. ಇದಾದ ನಂತರ ಕಾಂಬೋಜ್ ಶ್ರೀ ಗಂಗಾನಗರದ ಹೊಟೇಲ್ಗೆ ಕರೆಸಿ ಲೈಂಗಿಕವಾಗಿ ಶೋಷಿಸಿದ್ದರು. ಕಾಂಬೋಜ್‌ನ ಮೂವರು ಸ್ನೇಹಿತರು ಸಹ ಭಾಗಿಯಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಆರೋಪ ನಿರಾಕರಣೆ ಮಾಡಿದ ಆರೋಪ ಹೊತ್ತ ವ್ಯಕ್ತಿ: ಈ ಆರೋಪದ ನಂತರ ಕಾಂಬೋಜ್ ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ. ಅವರು ಹೇಳುವಂತೆ ಮಹಿಳೆ ತನಗೆ ಬ್ಲಾಕ್ ಮೇಲ್ ಮಾಡುತ್ತಿದ್ದಾಳೆ. ಅವರು ಸುಮಾರು ಆರು ತಿಂಗಳ ಹಿಂದೆ ಮಹಿಳೆಯೊಂದಿಗೆ ಸಂಪರ್ಕಕ್ಕೆ ಬಂದಿದ್ದರು. ಆದರೆ ಲೈಂಗಿಕ ದೌರ್ಜನ್ಯದ ಆರೋಪಗಳನ್ನು ನಿರಾಕರಿಸಿದರು. ಮಹಿಳೆ ರಾಜಸ್ಥಾನ ಪೊಲೀಸ್‌ನಲ್ಲಿ ಕಾನ್ಸ್ಟೇಬಲ್ ಆಗಿದ್ದು, ಪುರುಷರನ್ನು ಹನಿ ಟ್ರ್ಯಾಪಿಂಗ್ ಮಾಡಲು ಹೆಸರುವಾಸಿಯಾಗಿದ್ದಾರೆ. ನನ್ನನ್ನು ಹನಿಟ್ರ್ಯಾಪ್ ಮಾಡುತ್ತಿದ್ದಾರೆ ಎಂದು ಪ್ರತ್ಯಾರೋಪ ಮಾಡಿದ್ದಾರೆ.
ಅಲ್ಲದೇ, ಕೆಲವು ದಿನಗಳ ಹಿಂದೆ ಮಹಿಳೆ ತನ್ನಿಂದ ಮೂರು ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಈಗಾಗಲೇ ಪಕ್ಷದ ಹಿರಿಯ ನಾಯಕರಿಗೆ ಈ ಬಗ್ಗೆ ತಿಳಿಸಿದ್ದೇನೆ ಎಂದರು. ತನ್ನ ವಿರೋಧಿಗಳು ತನ್ನ ವಿರುದ್ಧ ಪ್ರಕರಣ ದಾಖಲಿಸಲು ಮಹಿಳೆಯನ್ನು ಪ್ರಚೋದಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡು ಶ್ರೀಗಂಗಾನಗರ ಎಸ್ಪಿ ಪ್ಯಾರಿಸ್ ದೇಶಮುಖ್ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಮಹಿಳಾ ಐಎಎಸ್ ಅಧಿಕಾರಿಗೆ ಕಿರುಕುಳ ನೀಡಿದ ಐಆರ್ಎಸ್ ಅಧಿಕಾರಿ ಬಂಧನ
ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ವಿದ್ಯಾರ್ಥಿನಿ ಅತ್ಯಚಾರಕ್ಕೆ ಯತ್ನ: ಮತ್ತೊಂದು ಕಡೆ, ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಕಿರುಕುಳ ನೀಡಿ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಇಲ್ಲಿ ಹಗಲು ಹೊತ್ತಿನಲ್ಲಿ 10 ಮಂದಿ ಹುಡುಗರು ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ್ದಾರೆ. ಕಿರುಕುಳದ ನಂತರ ಬಾಲಕಿಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗಿದೆ. ಈ ಘಟನೆ ಬಗ್ಗೆ ಜನರು ಕೂಡ ತೀವ್ರ ಟೀಕೆ ಮಾಡುತ್ತಿದ್ದಾರೆ.
ಸ್ಥಳೀಯ ಮೂಲಗಳ ಪ್ರಕಾರ, ಪೊಲೀಸರು ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿದ್ದು, ಒಬ್ಬ ಅಪ್ರಾಪ್ತನನ್ನು ಕೂಡ ಬಂಧಿಸಲಾಗಿದೆ. ಶೀಘ್ರದಲ್ಲಿಯೇ ಉಳಿದ 8 ಆರೋಪಿಗಳನ್ನು ಕೂಡ ಕಸ್ಟಡಿಗೆ ತೆಗೆದುಕೊಳ್ಳುವುದಾಗಿ ಪೊಲೀಸ್ ಹೇಳಿದ್ದಾರೆ. ಈ ನಡುವೆ ಸ್ಥಳೀಯ ಶಾಸಕ ಹಾಗೂ ಸಚಿವ ಮುರಾರಿ ಲಾಲ್ ಮೀನಾ ಕೂಡ ದೌಸಾ ಘಟನೆಯನ್ನು ಖಂಡಿಸಿದ್ದಾರೆ. ಇದರ ಜೊತೆಗೆ ಈ ವಿಚಾರವಾಗಿ ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡ ಶಂಕರ್ ಶರ್ಮಾ ಸರ್ಕಾರವನ್ನು ಟೀಕಿಸಿದ್ದಾರೆ.
ಇದನ್ನೂ ಓದಿ: ಹಳೆ ದ್ವೇಷದ ಹಿನ್ನೆಲೆ ಹತ್ಯೆ: ಎರಡೇ ದಿನದಲ್ಲಿ 7 ಮಂದಿ ಕೊಲೆ ಆರೋಪಿಗಳ ಬಂಧನ