ಮುಂಬೈ: ಭಾರತಕ್ಕೆ 2014ರಲ್ಲಿ ಸ್ವಾತಂತ್ರ್ಯ ಸಿಕ್ಕಿದ್ದು, 1947ರಲ್ಲಿ ಸಿಕ್ಕಿದ್ದು ಭಿಕ್ಷೆ ಎಂಬ ಹೇಳಿಕೆ ನೀಡಿರುವ ನಟಿ ಕಂಗನಾ ರಣಾವತ್ (Kangana Ranaut) ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಆಮ್ ಆದ್ಮಿ ಪಕ್ಷ (Aam Aadmi Party) ಮುಂಬೈ ಪೊಲೀಸರಿಗೆ ದೂರು ನೀಡಿದೆ.
ಎಎಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಪ್ರೀತಿ ಶರ್ಮಾ ಮೆನನ್, "ದೇಶದ್ರೋಹಿ ಮತ್ತು ಪ್ರಚೋದಕ" (Seditious and Inflammatory) ಎಂದು ಹೇಳಿಕೆಗಳನ್ನು ಖಂಡಿಸಿದ್ದಾರೆ. 1947 ರ ಭಾರತದ ಸ್ವಾತಂತ್ರ್ಯವು ಭಿಕ್ಷೆ ಮತ್ತು ನಿಜವಾದ ಸ್ವಾತಂತ್ರ್ಯವಲ್ಲ ಎಂದು ರಣಾವತ್ ಮಾಡಿದ ಅವಹೇಳನಕಾರಿ ಹೇಳಿಕೆಯನ್ನು ಎಎಪಿ ಬಲವಾಗಿ ಖಂಡಿಸುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.
ಮತ್ತೊಂದು ಟ್ವೀಟ್‌ನಲ್ಲಿ, ಮುಂಬೈ ಪೊಲೀಸರಿಗೆ ಸಲ್ಲಿಸಿರುವ ಮನವಿ ಅರ್ಜಿಯಲ್ಲಿ ಹಂಚಿಕೊಂಡಿರುವ ಮೆನನ್, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504, 505 ಮತ್ತು 124A ಅಡಿಯಲ್ಲಿ ರಣಾವತ್ ವಿರುದ್ಧ ಕ್ರಮ ಜರುಗಿಸಬೇಕು ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: Kangana Ranaut: ಬಾಲಿವುಡ್ ನಟಿ ಕಂಗನಾ ಶೀಘ್ರದಲ್ಲೇ ವಿವಾಹವಾಗಲಿದ್ದಾರಂತೆ!
ಬಿಜೆಪಿ ಲೋಕಸಭಾ ಸದಸ್ಯ ವರುಣ್ ಗಾಂಧಿ ಕೂಡ ರಣಾವತ್ ಹೇಳಿಕೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಇದು ದೇಶ ವಿರೋಧಿ ಕೃತ್ಯ. ಅದನ್ನು ಹಾಗೆಯೇ ಕರೆಯಬೇಕು ಎಂದು ಹೇಳಿದ್ದರು.