ನವದೆಹಲಿ: ಪಂಜಾಬ್ನಲ್ಲಿ ಕಾಂಗ್ರೆಸ್ ಸೇರಿದಂತೆ ಪ್ರಮುಖ ಪಕ್ಷಗಳಿಗೆ ತೀವ್ರ ಮುಖಭಂಗವಾಗುವ ರೀತಿಯಲ್ಲಿ ಭಾರಿ ಬಹುಮತದೊಂದಿಗೆ ಗೆದ್ದು ಬೀಗಿರುವ ಆಮ್ ಆದ್ಮಿ ಪಕ್ಷ, ಮುಂದಿನ ಕೆಲವೇ ದಿನಗಳಲ್ಲಿ ಹೊಸ ಸರ್ಕಾರ ರಚಿಸಲಿದೆ.
ರಾಜ್ಯದಲ್ಲಿ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಸಿಎಂ ಅಭ್ಯರ್ಥಿಯಾಗಿ ಘೋಷಿಸಲ್ಪಟ್ಟ 48 ವರ್ಷದ ಭಗವಂತ್ ಮನ್ ಪಕ್ಷವನ್ನು ಯಶಸ್ಸಿನ ದಡ ಸೇರಿಸುವಲ್ಲಿ ಯಶ ಕಂಡಿದ್ದಾರೆ. ಇದರ ಬೆನ್ನಲ್ಲೇ ದೆಹಲಿಗೆ ಆಗಮಿಸಿದ ಅವರು, ಪಕ್ಷದ ಮುಖ್ಯಸ್ಥ ಹಾಗು ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಡಿಸಿಎಂ ಮನೀಷ್ ಸಿಸೋಡಿಯಾ ಉಪಸ್ಥಿತರಿದ್ದರು.
ಇದನ್ನೂ ಓದಿ: 'ನೀವು ಏನನ್ನು ಬಿತ್ತಿದ್ದೀರೋ ಅದನ್ನೇ ಪಡೆಯುವಿರಿ': ಪಂಜಾಬ್ ಸೋಲಿನ ಬಗ್ಗೆ ಸಿಧು ಪ್ರತಿಕ್ರಿಯೆ!
117 ವಿಧಾನಸಭೆ ಕ್ಷೇತ್ರಗಳ ಪಂಜಾಬ್ ವಿಧಾನಸಭೆಯಲ್ಲಿ ಆಮ್ ಆದ್ಮಿ 92 ಸ್ಥಾನಗಳಲ್ಲಿ ಗೆದ್ದಿದೆ. ಕಾಂಗ್ರೆಸ್ ಕೇವಲ 18 ಸ್ಥಾನ ಗೆಲ್ಲಲು ಸಾಧ್ಯವಾಗಿದೆ.