ನವದೆಹಲಿ: 92 ವಿಧಾನಸಭಾ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ದಾಖಲು ಮಾಡುವ ಮೂಲಕ ಪಂಜಾಬ್ನಲ್ಲಿ ಆಪ್ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇದೀಗ ನೂತನ ಸರ್ಕಾರ ರಚನೆ ಮಾಡಲು ನಿಯೋಜಿತ ಸಿಎಂ ಭಗವಂತ್ ಮನ್ ಸಕಲ ರೀತಿಯಲ್ಲೂ ಸಜ್ಜಾಗುತ್ತಿದ್ದಾರೆ.
ದೆಹಲಿಯಲ್ಲಿಂದು ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹಾಗೂ ಮನೀಷ್ ಸಿಸೋಡಿಯಾ ಅವರನ್ನು ಭೇಟಿ ಮಾಡಿರುವ ಭಗವಂತ್ ಮನ್ ಪದಗ್ರಹಣ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.
ಇಂದು ಸಂಜೆ ಚಂಡೀಗಢನಲ್ಲಿ ಪಕ್ಷದ ಶಾಸಕಾಂಗ ಸಭೆ ನಡೆಸಲು ನಿರ್ಧರಿಸಲಾಗಿದ್ದು, ಎಎಸಿ ಶಾಸಕರು ಭಗವಂತ್ ಮನ್ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಿದ್ದಾರೆ. ಇದಾದ ಬಳಿಕ ಮಾರ್ಚ್ 13ರಂದು ಅಮೃತಸರದಲ್ಲಿ ಬೃಹತ್ ರೋಡ್ ಶೋ ನಡೆಸಲು ನಿರ್ಧರಿಸಲಾಗಿದೆ. ಇದರಲ್ಲಿ ಅರವಿಂದ್ ಕೇಜ್ರಿವಾಲ್ ಭಾಗಿಯಾಗಲಿದ್ದಾರೆ ಎಂದು ಅವರು ತಿಳಿಸಿದರು.
ಇದನ್ನೂ ಓದಿ: ಕೇಜ್ರಿವಾಲ್ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಪಂಜಾಬ್ ನಿಯೋಜಿತ ಸಿಎಂ ಭಗವಂತ್ ಮನ್!
ಈ ಸಂದರ್ಭದಲ್ಲಿ ಮಾತನಾಡಿರುವ ನೂತನ ಎಎಪಿ ಶಾಸಕ ಗುರುದೇವ್ ಸಿಂಗ್ ದೇವ್ ಮನ್, ಪಂಜಾಬ್ ಜನರ ಭರವಸೆ ಈಡೇರಿಸುತ್ತೇವೆ. ನಾವು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇವೆ. ಪಂಜಾಬ್ ರಾಜ್ಯವನ್ನು ಭ್ರಷ್ಟಾಚಾರ ಮತ್ತು ಮಾದಕ ವ್ಯಸನದಿಂದ ಮುಕ್ತಗೊಳಿಸುತ್ತೇವೆ. ಪ್ರತಿ ಕುಟುಂಬ ಸದಸ್ಯರಿಗೂ ಉದ್ಯೋಗ ಒದಗಿಸುವುದು ನಮ್ಮ ಗುರಿ ಎಂದರು.