ನವದೆಹಲಿ: ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದಿರುವ ಆಮ್ ಆದ್ಮಿ ಪಕ್ಷವು ಮುಂಬರುವ ರಾಜ್ಯಸಭಾ ಚುನಾವಣೆಗೆ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಸೇರಿ ಐವರನ್ನು ನಾಮನಿರ್ದೇಶನ ಮಾಡಲು ಉದ್ದೇಶಿಸಿದೆ.
ಇತ್ತೀಚಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ 117 ಸ್ಥಾನಗಳ ಪೈಕಿ 92 ಸ್ಥಾನಗಳಲ್ಲಿ ಆಪ್ ಗೆಲುವು ಸಾಧಿಸುವುದರೊಂದಿಗೆ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಿದೆ. ಇತ್ತ, ಪಂಜಾಬ್ನ ಐದು ರಾಜ್ಯಸಭೆ ಸದಸ್ಯ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಹೀಗಾಗಿ ರಾಜ್ಯಸಭೆಯ ಐದು ಸ್ಥಾನಗಳು ಆಮ್ ಆದ್ಮಿ ಪಕ್ಷಕ್ಕೆ ಬೋನಸ್ ರೂಪದಲ್ಲಿ ಸಿಕ್ಕಿವೆ. ಆದ್ದರಿಂದ ಪಂಜಾಬ್‌ನಿಂದ ಕ್ರಿಕೆಟಿಗ ಹರ್ಭಜನ್ ಸಿಂಗ್, ದೆಹಲಿ ಶಾಸಕ ರಾಘವ್ ಚಡ್ಡಾ ಮತ್ತು ಡಾ.ಸಂದೀಪ್ ಪಾಠಕ್, ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯ ಕುಲಪತಿ ಅಶೋಕ್ ಮಿತ್ತಲ್ ಹಾಗೂ ಸಂಜೀವ್ ಅರೋರಾ ಅವರನ್ನು ನಾಮನಿರ್ದೇಶನ ಮಾಡಲು ಆಮ್ ಆದ್ಮಿ ಪಕ್ಷ ತೀರ್ಮಾನಿಸಿದೆ.
-
Aam Aadmi Party to nominate cricketer Harbhajan Singh and Delhi MLA Raghav Chadha to Rajya Sabha, from Punjab
— ANI (@ANI) March 21, 2022 " class="align-text-top noRightClick twitterSection" data="
">Aam Aadmi Party to nominate cricketer Harbhajan Singh and Delhi MLA Raghav Chadha to Rajya Sabha, from Punjab
— ANI (@ANI) March 21, 2022Aam Aadmi Party to nominate cricketer Harbhajan Singh and Delhi MLA Raghav Chadha to Rajya Sabha, from Punjab
— ANI (@ANI) March 21, 2022
ಪ್ರಸ್ತುತ ಪಂಜಾಬ್‌ನಿಂದ ಆಯ್ಕೆಯಾಗಿರುವ ಕಾಂಗ್ರೆಸ್ನ ರಾಜ್ಯಸಭಾ ಸದಸ್ಯರಾದ ಪ್ರತಾಪ್ ಸಿಂಗ್ ಬಜ್ವಾ ಮತ್ತು ಸಮ್ಶೇರ ಸಿಂಗ್ ದುಲ್ಲೋ, ಶಿರೋಮಣಿ ಅಕಾಲಿ ದಳದ ಸದಸ್ಯರಾದ ಸುಖ್ದೇವ್ ಸಿಂಗ್ ಧಿಂಡ್ಸಾ ಮತ್ತು ನರೇಶ್ ಗುಜ್ರಾಲ್ ಹಾಗೂ ಬಿಜೆಪಿಯ ಶ್ವೈತ್ ಮಲಿಕ್ ನಿವೃತ್ತಿ ಹೊಂದುತ್ತಿದ್ದಾರೆ. ಈ ಸ್ಥಾನಗಳಿಗೆ ಆಪ್ ತನ್ನ ಅಭ್ಯರ್ಥಿಗಳನ್ನು ನಾಮನಿರ್ದೇಶನ ಮಾಡಲಿದೆ.
ಇದನ್ನೂ ಓದಿ: ಮಾ.24ಕ್ಕೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ.. 25ರಂದು ಯೋಗಿ ಆದಿತ್ಯನಾಥ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ