ETV Bharat / bharat

ಸುಗ್ರೀವಾಜ್ಞೆ ವಿಚಾರದಲ್ಲಿ ದೆಹಲಿ ಸರ್ಕಾರಕ್ಕೆ ಕಾಂಗ್ರೆಸ್‌ ಬೆಂಬಲ; ಬೆಂಗಳೂರಿನ ಪ್ರತಿಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳಲು ಆಪ್ ನಿರ್ಧಾರ

ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಪಕ್ಷಗಳ ಸಭೆಯಲ್ಲಿ ಎಎಪಿ ಭಾಗವಹಿಸಲಿದೆ ಎಂದು ರಾಘವ್ ಚಡ್ಡಾ ತಿಳಿಸಿದ್ದಾರೆ.

aap
ಎಎಪಿ
author img

By

Published : Jul 17, 2023, 8:36 AM IST

Updated : Jul 17, 2023, 9:19 AM IST

ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಒಗ್ಗಟ್ಟಿನಿಂದ ಎದುರಿಸಲು ಜಂಟಿ ಕಾರ್ಯತಂತ್ರ ರೂಪಿಸುವ ಸಲುವಾಗಿ ಬೆಂಗಳೂರಿನಲ್ಲಿ ಇಂದಿನಿಂದ ನಡೆಯಲಿರುವ ಪ್ರತಿಪಕ್ಷಗಳ ಸಭೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಪಾಲ್ಗೊಳ್ಳಲಿದೆ ಎಂದು ಪಕ್ಷದ ನಾಯಕ ರಾಘವ್ ಚಡ್ಡಾ ಭಾನುವಾರ ಹೇಳಿದ್ದಾರೆ.

ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ನಡೆದ ರಾಜಕೀಯ ವ್ಯವಹಾರಗಳ ಸಮಿತಿ (ಪಿಎಸಿ) ಸಭೆಯ ನಂತರ ಮಾತನಾಡಿದ ಅವರು, ದೆಹಲಿಯಲ್ಲಿ ಆಡಳಿತ ನಿಯಂತ್ರಣ ಸೇವೆಗಳ ಕುರಿತ ಕೇಂದ್ರದ ಸುಗ್ರೀವಾಜ್ಞೆಯನ್ನು ಸಂಸತ್ತಿನಲ್ಲಿ ವಿರೋಧಿಸುವ ಕಾಂಗ್ರೆಸ್ ನಿರ್ಧಾರವನ್ನು ಸ್ವಾಗತಿಸಿದರು. ಇದೇ ವೇಳೆ ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ನಡೆಯಲಿರುವ ಸಮಾನ ಮನಸ್ಕ ಪಕ್ಷಗಳ ಸಭೆಯಲ್ಲಿ ಕೇಜ್ರಿವಾಲ್ ನೇತೃತ್ವದಲ್ಲಿ ಎಎಪಿ ಭಾಗವಹಿಸಲಿದೆ ಎಂದು ತಿಳಿಸಿದರು.

  • Aam Aadmi Party welcomes Congress’ unequivocal opposition to the Delhi ordinance. AAP under the leadership of Shri @ArvindKejriwal will attend the meeting of like-minded parties on the 17th and 18th July in Bengaluru. pic.twitter.com/mdwEIqlV1A

    — Raghav Chadha (@raghav_chadha) July 16, 2023 " class="align-text-top noRightClick twitterSection" data=" ">

"ಆಮ್ ಆದ್ಮಿ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯು ಸಭೆ ಸೇರಿ ವಿಸ್ತೃತ ಚರ್ಚೆ ನಡೆಸಿತು. ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಕರೆಯ ಮೇರೆಗೆ ಟಿಎಂಸಿ, ಆರ್‌ಜೆಡಿ, ಜೆಡಿಯು, ಡಿಎಂಕೆ, ಬಿಆರ್​ಎಸ್, ಎನ್​ಸಿಪಿ, ಎಸ್‌ಪಿ, ಶಿವಸೇನೆ (ಯುಬಿಟಿ), ಸಿಪಿಐ, ಸಿಪಿಐ(ಎಂ), ಜೆಎಂಎಂ ಈ ಎಲ್ಲ ಪಕ್ಷಗಳು ಕರಾಳ ಸುಗ್ರೀವಾಜ್ಞೆಯ ವಿರುದ್ಧ ಧ್ವನಿ ಎತ್ತಿದವು. ಸಂಸತ್ತಿನಲ್ಲಿ ಮಸೂದೆಯನ್ನು ವಿರೋಧಿಸಲು ಬೆಂಬಲ ನೀಡುವ ಭರವಸೆ ನೀಡಿವೆ. ಸುಗ್ರೀವಾಜ್ಞೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಕೂಡ ತನ್ನ ನಿಲುವು ಸ್ಪಷ್ಟಪಡಿಸಿದೆ, ತಾನು ಸುಗ್ರೀವಾಜ್ಞೆಯ ಪರವಾಗಿಲ್ಲ ಎಂದು ತಿಳಿಸಿದೆ. ಇದು ಸಕಾರಾತ್ಮಕ ಬೆಳವಣಿಗೆ, ನಾವು ಇದನ್ನು ಸ್ವಾಗತಿಸುತ್ತೇವೆ" ಎಂದರು.

ಬೆಂಗಳೂರಿನಲ್ಲಿ ನಡೆಯುವ ಪ್ರತಿಪಕ್ಷಗಳ ಸಭೆಯ ಮೊದಲ ದಿನ ಸೋನಿಯಾ ಗಾಂಧಿ ಅವರು ಎಲ್ಲ ನಾಯಕರನ್ನು ಭೋಜನಕ್ಕೆ ಆಹ್ವಾನಿಸಿದ್ದಾರೆ. ಕೇಜ್ರಿವಾಲ್ ಅವರನ್ನೂ ಸಹ ಆಹ್ವಾನಿಸಲಾಗಿದೆ. ಪಾಟ್ನಾದಲ್ಲಿ ನಡೆದ ಸಭೆಯಲ್ಲಿ ಒಟ್ಟು 17 ವಿರೋಧ ಪಕ್ಷಗಳು ಭಾಗವಹಿಸಿದ್ದು, ಇದೀಗ ಬೆಂಗಳೂರಿನಲ್ಲಿ ನಡೆಯಲಿರುವ ಸಭೆಗೆ 8 ಹೊಸ ವಿರೋಧ ಪಕ್ಷಗಳಿಗೆ ಆಹ್ವಾನ ಕಳುಹಿಸಲಾಗಿದೆ.

ಪಾಟ್ನಾದಲ್ಲಿ ನಡೆದಿದ್ದ ಮೊದಲ ಸಭೆ: ಪ್ರತಿಪಕ್ಷಗಳ ಮೊದಲ ಸಭೆಯನ್ನು ಜೂನ್ 23ರಂದು ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಸಿಎಂ ನಿತೀಶ್ ಕುಮಾರ್ ಆಯೋಜಿಸಿದ್ದು, ಇದರಲ್ಲಿ 17 ವಿರೋಧ ಪಕ್ಷಗಳು ಭಾಗವಹಿಸಿದ್ದವು. ಈ ಸಭೆಯ ನಂತರ ವಿರೋಧ ಪಕ್ಷದ ನಾಯಕರು ಸಹ ಜಂಟಿ ಸುದ್ದಿಗೋಷ್ಠಿ ನಡೆಸಿದ್ದರು. ಆದರೆ, ಕೇಂದ್ರದ ಸುಗ್ರೀವಾಜ್ಞೆಗೆ ಕಾಂಗ್ರೆಸ್​ನ ಬೆಂಬಲದ ಕೊರತೆಯಿಂದ ಕೋಪಗೊಂಡ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ಪತ್ರಿಕಾಗೋಷ್ಠಿಗೆ ಹಾಜರಾಗಿರಲಿಲ್ಲ. ಕಾಂಗ್ರೆಸ್ ಬೆಂಬಲ ನೀಡದಿದ್ದರೆ ಪ್ರತಿಪಕ್ಷಗಳ ಸಭೆಗೆ ಹಾಜರಾಗುವುದಿಲ್ಲ ಎಂದು ಹೇಳಿದ್ದರು. ಇದೀಗ ಕಾಂಗ್ರೆಸ್ ಬೆಂಬಲ ನೀಡಲು ಸಮ್ಮತಿ ನೀಡಿದೆ.

ಹೊಸ ಸೇರ್ಪಡೆ ಯಾರು? : ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ (ಎಂಡಿಎಂಕೆ), ಕೊಂಗು ದೇಸ ಮಕ್ಕಳ ಕಚ್ಚಿ (ಕೆಡಿಎಂಕೆ), ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ಕ್ರಾಂತಿಕಾರಿ ಸಮಾಜವಾದಿ ಪಕ್ಷ, ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML), ಕೇರಳ ಕಾಂಗ್ರೆಸ್ (ಜೋಸೆಫ್) ಮತ್ತು ಕೇರಳ ಕಾಂಗ್ರೆಸ್ (ಮಣಿ).

ಇದನ್ನೂ ಓದಿ : ದೆಹಲಿ ಸುಗ್ರೀವಾಜ್ಞೆ ವಿರೋಧಿಸಲು ಕಾಂಗ್ರೆಸ್​ ನಿರ್ಣಯ.. ಸೋನಿಯಾ ಗಾಂಧಿ ನೇತೃತ್ವದ ಸಭೆಯಲ್ಲಿ ನಿರ್ಧಾರ

ದೆಹಲಿ ಸುಗ್ರೀವಾಜ್ಞೆ ವಿವಾದ : ದೆಹಲಿಯಲ್ಲಿ ಐಎಎಸ್ ಮತ್ತು ಡ್ಯಾನಿಕ್ಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಮತ್ತು ನಿಯೋಜಿಸುವ ಅಧಿಕಾರವನ್ನು ಹೊಂದಲು ಕೇಂದ್ರ ಸರ್ಕಾರ ಮೇ 19 ರಂದು ಸುಗ್ರೀವಾಜ್ಞೆ ಜಾರಿ ಮಾಡಿತ್ತು. ದೆಹಲಿ ಸರ್ಕಾರವು ಈ ಕ್ರಮವನ್ನು ಸೇವೆಗಳ ನಿಯಂತ್ರಣದ ಸುಪ್ರೀಂ ಕೋರ್ಟ್ ತೀರ್ಪಿನ ಉಲ್ಲಂಘನೆ ಎಂದು ಆರೋಪಿ ನ್ಯಾಯಾಲಯದ ಮೆಟ್ಟಿಲೇರಿದೆ. 1991ರ ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರ್ಕಾರದ ಕಾಯ್ದೆಗೆ ತಿದ್ದುಪಡಿ ಮಾಡಲು ಸುಗ್ರೀವಾಜ್ಞೆ ತರಲಾಗಿದೆ.

Last Updated : Jul 17, 2023, 9:19 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.