ಸೂರತ್: ಗುಜರಾತ್ನ ಆರು ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಭರ್ಜರಿ ಗೆಲುವು ದಾಖಲು ಮಾಡಿದ್ದು, ಇದರ ಮಧ್ಯೆ ಕೂಡ ಆಮ್ ಆದ್ಮಿ ಪಕ್ಷ ಗುಜರಾತ್ನ ಕೆಲವೊಂದು ಸ್ಥಳಗಳಲ್ಲಿ ಜಯಭೇರಿ ಬಾರಿಸಿದೆ.
ಸೂರತ್ ಮುನ್ಸಿಪಾಲ್ ಕಾರ್ಪೋರೇಷನ್ನಿಂದ ಚುನಾವಣೆ ಎದುರಿಸಿದ್ದ 22 ವರ್ಷದ ಪಾಯಲ್ ಪಟೇಲ್ ಇದೀಗ ಗೆಲುವು ದಾಖಲು ಮಾಡಿದ್ದಾರೆ. ವಾರ್ಡ್ ನಂಬರ್ 16ರಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.
ಯಾರು ಈ ಪಾಯಲ್ ಪಟೇಲ್?
22 ವರ್ಷದ ಪಾಯಲ್ ನಟಿಯಾಗಿ ಗುರುತಿಸಿಕೊಂಡಿದ್ದರು. ಆದರೆ ರಾಜಕೀಯದಲ್ಲಿ ಗುರುತಿಸಿಕೊಳ್ಳುವ ಉದ್ದೇಶದಿಂದ ಅದೃಷ್ಟ ಪರೀಕ್ಷೆಗೆ ಇಳಿದು ಅದರಲ್ಲಿ ಜಯ ಸಾಧಿಸಿದ್ದಾರೆ. ಸೂರತ್ನ 120 ಸ್ಥಾನಗಳಲ್ಲಿ ಆಮ್ ಆದ್ಮಿ ಪಕ್ಷ 27 ಸ್ಥಾನಗಳಲ್ಲಿ ಗೆಲುವು ದಾಖಲು ಮಾಡಿದ್ದು, ಫೆ. 26ರಂದು ಕೇಜ್ರಿವಾಲ್ ಇಲ್ಲಿಗೆ ಭೇಟಿ ನೀಡಿ ರೋಡ್ ಶೋ ನಡೆಸಲಿದ್ದಾರೆ.