ನವದೆಹಲಿ: ದೆಹಲಿ ವಕ್ಫ್ ಬೋರ್ಡ್‌ನಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಂಧಿಸಿದೆ. ಅಲ್ಲದೇ, ಗನ್, ಗುಂಡು ಹಾಗೂ ನಗದು ಹಣವನ್ನು ವಶಕ್ಕೆ ಪಡೆಯಲಾಗಿದೆ.
ವಕ್ಫ್ ಬೋರ್ಡ್‌ನ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ಶಾಸಕ ಅಮಾನತುಲ್ಲಾ ಖಾನ್ ಸಹಚರರಿಗೆ ಸೇರಿದ ನಾಲ್ಕು ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿತ್ತು. ಈ ವೇಳೆ ಸಹವರ್ತಿ ಹಮೀದ್ ಅಲಿ ಬಳಿ ಗನ್, ಗುಂಡು ಮತ್ತು 12 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. ಗನ್ ಪರವಾನಗಿ ಖಚಿತ ಪಡಿಸಲು ಹಮೀದ್ ಅಲಿ ವಿಫಲರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ದಾಳಿಯ ನಂತರ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ಅಧಿಕಾರಿಗಳು ಬಂದಿದೆ. ನೇಮಕಾತಿ ಅಕ್ರಮದಲ್ಲಿ ಕ್ರಿಮಿನಲ್ ಪಿತೂರಿ ಸಂಬಂಧ ತನಿಖೆ ನಡೆಯುತ್ತಿದೆ. ಅಮಾನತುಲ್ಲಾ ವಕ್ಫ್ ಬೋರ್ಡ್‌ನ ಅಧ್ಯಕ್ಷರಾಗಿರುವ ಕಾರಣ ಅವರನ್ನು ಪ್ರಕರಣದಲ್ಲಿ ಆರೋಪಿಯನ್ನಾಗಿ ಮಾಡಲಾಗಿದೆ.
ಇದನ್ನೂ ಓದಿ: ಇಡೀ ಗ್ರಾಮವೇ ನಮಗೆ ಸೇರಿದ್ದು ವಕ್ಫ್ ಮಂಡಳಿ ನೋಟಿಸ್: ಡಿಎಂಕೆ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ