ಹೈದರಾಬಾದ್ (ತೆಲಂಗಾಣ): ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಪಕ್ಷದ ನಾಲ್ವರು ಶಾಸಕರಿಗೆ ಹಣದ ಅಮಿಷವೊಡ್ಡಿ ಖರೀದಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ನ ಹೊರವಲಯದ ಫಾರ್ಮ್‌ಹೌಸ್‌ನಲ್ಲಿ ನಾಲ್ವರನ್ನು ಪೊಲೀಸರು ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದರು.
ಈ ಪ್ರಕರಣ ಸಂಬಂಧ ಮೂವರು ಆರೋಪಿಗಳ ರಿಮ್ಯಾಂಡ್ಗೆ ಎಸಿಬಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ನಿರಾಕರಿಸಿದ್ದಾರೆ. ಕೂಡಲೇ ಅವರನ್ನು ಬಿಡುಗಡೆ ಮಾಡಿ 41 ಸಿಆರ್ ಪಿಸಿ ಅಡಿಯಲ್ಲಿ ನೋಟಿಸ್ ಜಾರಿ ಮಾಡಿದ ನಂತರವೇ ತನಿಖೆ ನಡೆಸಬೇಕು ಎಂದು ಸೂಚಿಸಿದ್ದಾರೆ.
ಆರೋಪಿಗಳಾದ ರಾಮಚಂದ್ರ ಭಾರತಿ, ಸಿಂಹಯಾಜಿ ಮತ್ತು ನಂದಕುಮಾರ್ ಅವರನ್ನು ಪೊಲೀಸರು ಗುರುವಾರ ರಾತ್ರಿ ನ್ಯಾಯಾಧೀಶ ಜಿ.ರಾಜಗೋಪಾಲ್ ಅವರ ನಿವಾಸಕ್ಕೆ ಕರೆದೊಯ್ದು ಅವರ ಮುಂದೆ ಹಾಜರುಪಡಿಸಿದರು. ಲಂಚದ ಹಣ ಪತ್ತೆಯಾಗದ ಕಾರಣ ಈ ಪ್ರಕರಣಕ್ಕೆ ಭ್ರಷ್ಟಾಚಾರ ತಡೆ ಕಾಯ್ದೆ (ಪಿಸಿ ಕಾಯ್ದೆ) ಅನ್ವಯವಾಗುವುದಿಲ್ಲ ಎಂದಿದ್ದಾರೆ.
ಟಿಆರ್‌ಎಸ್ ಶಾಸಕರಿಗೆ ಆಮಿಷ ಒಡ್ಡಿದ ಆರೋಪದ ಮೇಲೆ ಮೂವರು ಆರೋಪಿಗಳ ವಿರುದ್ಧ ಸೈಬರಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಾತ್ರಿವರೆಗೂ ಕೂಲಂಕಷವಾಗಿ ತನಿಖೆ ನಡೆಸಿದ್ದರು. ಆರೋಪಿಗಳು ಕೋಟಿಗಟ್ಟಲೆ ನಗದನ್ನು ತಂದಿದ್ದಾರೆ ಎಂದು ಆರೋಪ ಮಾಡಿದರೂ ಪೊಲೀಸರು ಅದಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ಬಹಿರಂಗಪಡಿಸಿಲ್ಲ.
ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನಲ್ಲಿ : ದೆಹಲಿ ಮೂಲದ ರಾಮಚಂದ್ರ ಭಾರತಿ ಅಲಿಯಾಸ್ ಸತೀಶ್ ಶರ್ಮಾ ಮತ್ತು ಹೈದರಾಬಾದ್ ಮೂಲದ ನಂದಕುಮಾರ್ ಅವರು ಸೆಪ್ಟೆಂಬರ್ 26 ರಂದು ತಾಂಡೂರ್ ಶಾಸಕ ರೋಹಿತ್ ರೆಡ್ಡಿ ಅವರನ್ನು ಭೇಟಿ ಮಾಡಿದ್ದಾರೆ. ಟಿಆರ್‌ಎಸ್‌ಗೆ ರಾಜೀನಾಮೆ ನೀಡಿ ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಸ್ಪರ್ಧಿಸಿದರೆ ಅವರಿಗೆ 100 ಕೋಟಿ ರೂ ಕೇಂದ್ರ ಸರ್ಕಾರದ ಅಡಿಯಲ್ಲಿ ಕೊಡುವ ಬಗ್ಗೆ ಒಪ್ಪಂದಗಳು ಆಗಿವೆ ಎಂಬ ಆರೋಪ ಮಾಡಲಾಗಿತ್ತು.
ಇದನ್ನೂ ಓದಿ : ಟಿಆರ್‌ಎಸ್ ಶಾಸಕರ ಖರೀದಿಗೆ ಯತ್ನ ಪ್ರಕರಣ: ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲು
ಪ್ರಕರಣಗಳು : ಮೂವರು ಆರೋಪಿಗಳ ವಿರುದ್ಧ ಸೆಕ್ಷನ್ 120-ಬಿ (ಅಪರಾಧ ಸಂಚು), 171-ಬಿ ರೆಡ್‌ವಿತ್ 171-ಇ 506 (ಕ್ರಿಮಿನಲ್ ಬೆದರಿಕೆ) ರೆಡ್‌ವಿತ್ 34 ಐಪಿಸಿ, ಭ್ರಷ್ಟಾಚಾರ ತಡೆ ಕಾಯ್ದೆ-1988 ಸೆಕ್ಷನ್ 8 (ಸರ್ಕಾರಿ ಅಧಿಕಾರಿಗೆ ಲಂಚ ನೀಡುವುದು) ಅಡಿ ಪ್ರಕರಣ ದಾಖಲಿಸಲಾಗಿದೆ.
ಕಾರು ಚಾಲಕನ ವಿಚಾರಣೆ : ಮೂವರು ಆರೋಪಿಗಳು ಬಳಸಿದ್ದ ಟಿಎಸ್ 07 ಹೆಚ್ಎಂ 2777 ನಂಬರ್ ಕಾರಿನ ಚಾಲಕ ತಿರುಪತಿಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಬುಧವಾರ ಮಧ್ಯಾಹ್ನ ಶಂಶಾಬಾದ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಸಿಂಹಯಾಜಿ ಮತ್ತು ರಾಮಚಂದ್ರರನ್ನು ಚಾಲಕ ತಿರುಪತಿ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ. ಮಧ್ಯದಲ್ಲಿ ನಂದಕುಮಾರ್ ಅವರನ್ನು ಭೇಟಿಯಾದರು. ಮೂವರನ್ನು ಒಂದೇ ಕಾರಿನಲ್ಲಿ ಮೊಯಿನಾಬಾದ್ ಫಾರ್ಮ್‌ಹೌಸ್‌ಗೆ ಬಂದಿದ್ದಾರೆ. ಫಾರ್ಮ್‌ಹೌಸ್‌ಗೆ ಬರುವ ಮೊದಲು ನೀವು ಬೇರೆ ಯಾರನ್ನಾದರೂ ಭೇಟಿ ಮಾಡಿದ್ದೀರಾ? ಪೊಲೀಸರು ಚಾಲಕನನ್ನು ವಿಚಾರಿಸಿದ್ದಾರೆ.
ಇದನ್ನೂ ಓದಿ : ಟಿಆರ್ಎಸ್ನ ನಾಲ್ವರು ಶಾಸಕರ ಖರೀದಿ ಯತ್ನ: ಫಾರ್ಮ್‌ಹೌಸ್‌ನಲ್ಲಿ ನೋಟುಗಳ ಬಂಡಲ್ ಸಮೇತ ನಾಲ್ವರ ಸೆರೆ