ಕತಿಹಾರ್(ಬಿಹಾರ): ಆಟೋಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಎಂಟು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ಕತಿಹಾರ ಜಿಲ್ಲಾ ಕೇಂದ್ರದಿಂದ ಎಂಟು ಕಿಮೀ ದೂರದಲ್ಲಿರುವ ಕೋಧಾ ಪೊಲೀಸ್ ಠಾಣೆ ವ್ಯಾಪ್ತಿಯ ದಿಗ್ರಿ ಪೆಟ್ರೋಲ್ ಪಂಪ್ ಬಳಿಯ ರಾಷ್ಟ್ರೀಯ ಹೆದ್ದಾರಿ 81ರಲ್ಲಿ ನಡೆದಿದೆ.
ಮೃತರೆಲ್ಲರೂ ಒಂದೇ ಕುಟುಂಬದವರು: ಮೃತರೆಲ್ಲರೂ ಒಂದೇ ಕುಟುಂಬದವರಾಗಿದ್ದು, ಆಟೋದಲ್ಲಿ ಖೇರಿಯಾದಿಂದ ಕತಿಹಾರ್‌ಗೆ ಹೋಗುತ್ತಿದ್ದರು. ಅಷ್ಟರಲ್ಲಿ ನಿಯಂತ್ರಣ ತಪ್ಪಿದ ಲಾರಿಯೊಂದು ಆಟೋಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಆದ ಶಬ್ದ ಕೇಳಿ ಸ್ಥಳಕ್ಕೆ ಜನರು ಆಗಮಿಸುವ ವೇಳೆ ಆಟೋದಲ್ಲಿದ್ದವರು ಸಾವನ್ನಪ್ಪಿದ್ದರು. ಇವರು ಖೇರಿಯಾದಿಂದ ಕತಿಹಾರ್ ರೈಲು ಜಂಕ್ಷನ್‌ಗೆ ಹೋಗುತ್ತಿದ್ದರು ಎಂದು ತಿಳಿದುಬಂದಿದೆ. ಆಟೋದಲ್ಲಿ ಒಟ್ಟು ಎಂಟು ಮಂದಿ ಇದ್ದರು. ರಾತ್ರಿ 8.20ರ ಸುಮಾರಿಗೆ ಘಟನೆ ನಡೆದಿದೆ.
ಮೃತರನ್ನು ಧನಂಜಯ್ ಠಾಕೂರ್, ಅರುಣ್ ಠಾಕೂರ್, ಊರ್ಮಿಳಾ ದೇವಿ, ಮುಖರ್ಜಿ, ಲಾಲು, ಗೋಲು ಮತ್ತು ಆಟೋ ಚಾಲಕ ಪಪ್ಪು ಪಾಸ್ವಾನ್ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಎಸ್ಪಿ ಜಿತೇಂದ್ರ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ. ಈ ಘಟನೆಯ ನಂತರ ಟ್ರಕ್ ಚಾಲಕ ಪರಾರಿಯಾಗಿದ್ದಾನೆ.
ಮೃತರಲ್ಲಿ ಇಬ್ಬರು ಮಹಿಳೆಯರೂ ಸೇರಿದ್ದಾರೆ: ಖೇರಿಯಾದ ಎಲ್ಲಾ ನಿವಾಸಿಗಳು ನೀರಜ್ ಠಾಕೂರ್ ಕುಟುಂಬದ ಸದಸ್ಯರು. ಮೃತರಲ್ಲಿ ಇಬ್ಬರು ಮಹಿಳೆಯರೂ ಸೇರಿದ್ದಾರೆ. ಮಾಹಿತಿಯ ನಂತರ ಕೋಡಾ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸದ್ಯ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ಕೋಧಾ ಪೊಲೀಸ್ ಠಾಣೆ ಅಧ್ಯಕ್ಷ ರೂಪಕ್ ರಂಜನ್ ಸಿಂಗ್ ತಿಳಿಸಿದ್ದಾರೆ. ಮೃತರ ಸಂಬಂಧಿಕರೊಂದಿಗೆ ಮಾತುಕತೆ ನಡೆಸಲಾಗುತ್ತಿದೆ.
ಟ್ರಕ್ ಮತ್ತು ಆಟೋ ನಡುವೆ ಡಿಕ್ಕಿ ಸಂಭವಿಸಿದೆ. ಇದರಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ. ಎಲ್ಲಾ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ. ಘಟನೆಯ ಬಗ್ಗೆ ಕುಟುಂಬ ಸದಸ್ಯರಿಂದ ಮಾಹಿತಿ ಪಡೆಯಲಾಗುತ್ತಿದೆ. ಹೆಚ್ಚಿನ ತನಿಖೆ ನಡೆಸಲಾಗುವುದು. ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕೋಧಾ ಪೊಲೀಸ್ ಠಾಣಾಧಿಕಾರಿ ರೂಪಕ್ ರಂಜನ್ ಸಿಂಗ್ ತಿಳಿಸಿದ್ದಾರೆ.
ಪ್ರತ್ಯೇಕ ಘಟನೆ ಲಖನೌ (ಉತ್ತರಪ್ರದೇಶ) : ಆಗ್ರಾ-ಲಖನೌ ಎಕ್ಸ್ಪ್ರೆಸ್ವೇಯಲ್ಲಿ ಜರುಗಿದ ಎರಡು ರಸ್ತೆ ಅಪಘಾತಗಳಲ್ಲಿ ಸುಮಾರು 7 ಜನ ಸಾವನ್ನಪ್ಪಿದ್ದು, 30 ಮಂದಿ ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕನೌಜ್ನಲ್ಲಿ ಮೂವರು ಸಾವು: ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯ ಥಾಥಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಪಿಪ್ರೌಲಿ ಗ್ರಾಮದ ಬಳಿ ಇಂದು ನಸುಕಿನ ಜಾವ ದಟ್ಟ ಮಂಜಿನಿಂದಾಗಿ ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದು ನೆಲಕ್ಕುರುಳಿತು. ಇದರಲ್ಲಿ 11 ವರ್ಷದ ಬಾಲಕ ಸೇರಿದಂತೆ ಮೂವರು ಸಾವನ್ನಪ್ಪಿದ್ದು, ಸುಮಾರು 17 ಪ್ರಯಾಣಿಕರು ಗಾಯಗೊಂಡಿದ್ದಾರೆ. ಪೊಲೀಸರು ಮತ್ತು ಯುಪಿಐಡಿಎ ತಂಡ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯ ಕೈಗೊಂಡರು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಆರು ಮಂದಿಯನ್ನು ವೈದ್ಯಕೀಯ ಕಾಲೇಜು ತಿರ್ವಾಗೆ ದಾಖಲಿಸಲಾಗಿದೆ. ಬಸ್ ದೆಹಲಿಯಿಂದ ಲಖನೌಗೆ ಹೋಗುತ್ತಿತ್ತು ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ಪ್ರತ್ಯೇಕ ಅಪಘಾತದಲ್ಲಿ 7 ಸಾವು, 30 ಮಂದಿಗೆ ಗಾಯ