ETV Bharat / bharat

ಟ್ರಕ್ ಕಾರು ಮಧ್ಯೆ ಅಪಘಾತ: ಮೂವರು ಸ್ಥಳದಲ್ಲೇ ಸಾವು - ಕಾರಿನ ಜಖಂಗೊಂಡ ಅವಶೇಷ

ಮುಂದಿದ್ದ ವಾಹನವನ್ನು ಹಿಂದಿಕ್ಕಲು ಪ್ರಯತ್ನಿಸುತ್ತಿದ್ದ ಕಾರು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

accident-between-truck-and-car-three-died-in-spot
ಟ್ರಕ್ ಹಾಗೂ ಕಾರು ಮಧ್ಯೆ ಅಪಘಾತ: ಮೂವರು ಸ್ಥಳದಲ್ಲೇ ಸಾವು
author img

By

Published : Dec 10, 2022, 1:05 PM IST

ಹೈದರಾಬಾದ್: ನಿಜಾಮಾಬಾದ್ ಜಿಲ್ಲೆಯ ಆರ್ಮೂರ್ ಮಂಡಲದ ಚೇಪುರ್ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಹಾಗೂ ಕಾರಿನ ಮಧ್ಯೆ ಇಂದು ಸಂಭವಿಸಿದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತ್ಯಕ್ಷದರ್ಶಿಗಳು ಹೇಳಿರುವಂತೆ ಮುಂದಿದ್ದ ವಾಹನವನ್ನು ಹಿಂದಿಕ್ಕಲು ಪ್ರಯತ್ನಿಸುತ್ತಿದ್ದ ಕಾರು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಮೃತರನ್ನು ನಂದಿಪೇಟೆ ನಿವಾಸಿಗಳಾದ ಅಶೋಕ್, ಮೋಹನ್ ಮತ್ತು ರಮೇಶ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಕಾರಿನ ಜಖಂಗೊಂಡ ಅವಶೇಷಗಳಿಂದ ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಟ್ಟರು.

ಇದನ್ನೂ ಓದಿ: ಟೈರ್​ ಸ್ಫೋಟಿಸಿ ಮತ್ತೊಂದು ವಾಹನಕ್ಕೆ ಕಾರು ಡಿಕ್ಕಿ: ನಾಲ್ವರು ವಿದ್ಯಾರ್ಥಿಗಳ ದುರ್ಮರಣ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.