ಚೊಟಾದಿಪುರ್(ಗುಜರಾತ್): ಖಾಸಗಿ ಬಸ್ ಹಾಗೂ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ದುರ್ಮರಣಕ್ಕೀಡಾಗಿ, ಕೆಲವರು ಗಾಯಗೊಂಡಿರುವ ಘಟನೆ ಗುಜರಾತ್ನ ಚೊಟಾದಿಪುರ್ನಲ್ಲಿ ನಡೆದಿದೆ.
ಇಂದು ಮಧ್ಯಾಹ್ನ 2:30ರ ಸುಮಾರಿಗೆ ಈ ಘಟನೆ ನಡೆದಿದಿದೆ. ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ಇವರೆಲ್ಲರೂ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯವರು ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಬಸ್-ಕಾರಿನ ಮಧ್ಯೆ ಅಪಘಾತವಾಗುತ್ತಿದ್ದಂತೆ ಸ್ಥಳದಲ್ಲೇ ಕಾರು ಹೊತ್ತಿ ಉರಿದಿದೆ. ಈ ವೇಳೆ ಬಸ್ನಲ್ಲಿದ್ದ ಕೆಲವರು ರಕ್ಷಣೆಗೆ ಮುಂದಾಗಿದ್ದಾರೆ. ಈ ವೇಳೆ ನಾಲ್ವರು ಸಾವನ್ನಪ್ಪಿದ್ದು, ಉಳಿದಂತೆ ಕೆಲವರ ರಕ್ಷಣೆ ಮಾಡಿದ್ದಾರೆಂದು ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Pornography Case.. ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಜಾಮೀನು ಅರ್ಜಿ ವಜಾ
ಕಾರು ವೇಗವಾಗಿ ಚಲಿಸುತ್ತಿದ್ದ ಸಂದರ್ಭದಲ್ಲಿ ನಿಯಂತ್ರಣ ಕಳೆದುಕೊಂಡು ಏಕಾಏಕಿ ಬಸ್ಗೆ ಡಿಕ್ಕಿ ಹೊಡೆದಿರುವುದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಈಗಾಗಲೇ ಮೃತದೇಹಗಳನ್ನ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ.