ETV Bharat / bharat

ಸರ್ಕಾರಿ ಶಾಲೆಗಳ ಶೌಚಾಲಯಗಳ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ: ಆಂಧ್ರ ಸಿಎಂ

ಶಿಕ್ಷಣ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿದ ಜಗನ್, ಶೌಚಾಲಯ ನಿರ್ವಹಣೆ ಸರಿಯಾಗಿ ಇಲ್ಲದಿರುವುದರಿಂದ ಬಹುತೇಕ ವಿದ್ಯಾರ್ಥಿಗಳು ಶಾಲೆಗೆ ಬರುತ್ತಿಲ್ಲ. ಆದಷ್ಟು ಬೇಗ ಕೊಳಾಯಿ, ನೈರ್ಮಲ್ಯ ಸಮಸ್ಯೆ ಸೇರಿದಂತೆ ಶಾಲೆಗಳಲ್ಲಿರುವ ಸಮಸ್ಯೆಗಳನ್ನು ಪರಿಹರಿಸಿ ಎಂದು ಸೂಚಿಸಿದರು.

author img

By

Published : Jan 19, 2021, 11:59 AM IST

CM
ಆಂಧ್ರ ಸಿಎಂ

ಅಮರಾವತಿ (ಆಂಧ್ರಪ್ರದೇಶ): ಸರ್ಕಾರಿ ಶಾಲೆಗಳಲ್ಲಿ ಶೌಚಾಲಯಗಳನ್ನು ಸ್ವಚ್ಛವಾಗಿಡುವುದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಸಿಎಂ ವೈ.ಎಸ್.ಜಗನ್​ಮೋಹನ್​ ರೆಡ್ಡಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಶಿಕ್ಷಣ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿದ ಜಗನ್, ಶೌಚಾಲಯ ನಿರ್ವಹಣೆ ಸರಿಯಾಗಿ ಇಲ್ಲದಿರುವುದರಿಂದ ಬಹುತೇಕ ವಿದ್ಯಾರ್ಥಿಗಳು ಶಾಲೆಗೆ ಬರುತ್ತಿಲ್ಲ. ಆದಷ್ಟು ಬೇಗ ಕೊಳಾಯಿ, ನೈರ್ಮಲ್ಯ ಸಮಸ್ಯೆ ಸೇರಿದಂತೆ ಶಾಲೆಗಳಲ್ಲಿರುವ ಸಮಸ್ಯೆಗಳನ್ನು ಪರಿಹರಿಸಿ ಎಂದು ಸೂಚಿಸಿದರು.

ನಾಡು - ನೆಡು, ಗೋರು ಮುದ್ದಾ, ಅಮ್ಮ ವೋಡಿ, ಇಂಗ್ಲಿಷ್ ಮಾಧ್ಯಮ ಮತ್ತು ವಿದ್ಯಾ ಕನುಕಾ ಮುಂತಾದ ಯೋಜನೆಗಳ ಮೂಲಕ ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದಿದೆ. ಅಂತೆಯೇ 445 ಕೋಟಿ ರೂಪಾಯಿ ವೆಚ್ಚದಲ್ಲಿ ಶೌಚಾಲಯಗಳ ನಿರ್ಮಾಣ ಕಾರ್ಯದಲ್ಲಿ ತೊಡಗಿದೆ ಎಂದರು.

ಸಭೆಯಲ್ಲಿ ಶಾಲಾ ಶಿಕ್ಷಣ ಪ್ರಧಾನ ಕಾರ್ಯದರ್ಶಿ ಬುಡಿಟಿ ರಾಜ್ ಶೇಖರ್, ಪುರಸಭೆ ಮತ್ತು ನಗರಾಭಿವೃದ್ಧಿ ಕಾರ್ಯದರ್ಶಿ ವೈ.ಶ್ರೀಲಕ್ಷ್ಮಿ, ಬುಡಕಟ್ಟು ಕಲ್ಯಾಣ ಕಾರ್ಯದರ್ಶಿ ಕಾಂತಿಲಾಲ್ ದಾಂಡೆ, ಶಾಲಾ ಶಿಕ್ಷಣ ಆಯುಕ್ತ ವಿ.ಚಿನವೀರಭದ್ರುಡು ಸೇರಿ ಹಲವರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.