ETV Bharat / bharat

ಕಮಿಷನ್ ನೀಡದ್ದಕ್ಕೆ ನಟಿ ಉರ್ಫಿ ಜಾವೇದ್​ಗೆ ಅತ್ಯಾಚಾರ, ಕೊಲೆ ಬೆದರಿಕೆ?: ರಿಯಲ್ ಎಸ್ಟೇಟ್ ಬ್ರೋಕರ್ ಸೆರೆ

ನಟಿ ಉರ್ಫಿ ಜಾವೇದ್​ಗೆ ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಹಾಕಿದ್ದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ರಿಯಲ್ ಎಸ್ಟೇಟ್ ಬ್ರೋಕರ್​ನನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ.

author img

By

Published : Dec 20, 2022, 6:48 PM IST

Uorfi Javed
ನಟಿ ಉರ್ಫಿ ಜಾವೇದ್

ಮುಂಬೈ (ಮಹಾರಾಷ್ಟ್ರ): ವಿಚಿತ್ರ ಧರಿಸುಗಳು ಮೂಲಕವೇ ಸುದ್ದಿಯಾಗುವ ನಟಿ ಉರ್ಫಿ ಜಾವೇದ್​ಗೆ ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಹಾಕಿದ್ದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದಲ್ಲಿ ಓರ್ವ ಆರೋಪಿಯನ್ನು ಮಹಾರಾಷ್ಟ್ರದ ಮುಂಬೈನ ಪೊಲೀಸರು ಬಂಧಿಸಿದ್ದಾರೆ.

ನವೀನ್​ ಗಿರಿ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಈತನನ್ನು ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಮೂಲಗಳ ಪ್ರಕಾರ, ಬಂಧಿತ ಆರೋಪಿ ರಿಯಲ್ ಎಸ್ಟೇಟ್ ಬ್ರೋಕರ್ ಆಗಿದ್ದು, ಈ ವ್ಯಕ್ತಿ ಉರ್ಫಿ ಜಾವೇದ್​ಗೆ ಬಾಡಿಗೆ ಫ್ಲಾಟ್ ಕೊಡಿಸಿದ್ದ. ಆದರೆ, ಈ ಫ್ಲಾಟ್ ಪಡೆದ ಉರ್ಫಿ ಜಾವೇದ್ ಆರೋಪಿಗೆ ಕಮಿಷನ್ ನೀಡಿರಲಿಲ್ಲ. ಹೀಗಾಗಿ ವಾಟ್ಸ್​ಆ್ಯಪ್​ನಲ್ಲಿ ನಟಿಗೆ ಆರೋಪಿ ಈ ರೀತಿ ಬೆದರಿಕೆ ಹಾಕಿದ್ದ ಎಂದು ಮೂಲಗಳು ತಿಳಿಸಿವೆ.

ಇತ್ತೀಚಿಗೆ ಮೊಬೈಲ್ ಮೂಲಕ ನಟಿ ಉರ್ಫಿ ಜಾವೇದ್​ಗೆ ಅತ್ಯಾಚಾರ ಎಸಗಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿತ್ತು. ಈ ಬಗ್ಗೆ ಮುಂಬೈನ ಗೋರೆಗಾಂವ್ ಪೊಲೀಸ್ ಠಾಣೆಯಲ್ಲಿ ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅಂತೆಯೇ, ಮುಂಬೈ ಪೊಲೀಸರು ಆರೋಪಿಯನ್ನು ಪತ್ತೆ ಹೆಚ್ಚಿ ಬಂಧಿಸಿದ್ದಾರೆ.

ಇದನ್ನೂ ಓದಿ: ಕಟೌಟ್ ಸುಂದರಿ ಉರ್ಫಿ ಜಾವೇದ್​ಗೆ ಅತ್ಯಾಚಾರ, ಕೊಲೆ ಬೆದರಿಕೆ ಕರೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.